ಬೆಂಗಳೂರು: ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಾಕರ ಅರ್ಹತಾ ಪರೀಕ್ಷೆ ( Karnataka State Assistant Professors Eligibility Test – K-SET ) ಅನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ( KEA) ಮೂಲಕ ನಡೆಸಲು ರಾಜ್ಯ ಸರ್ಕಾರ ಆದೇಶಿಸಿದೆ.
BIGG NEWS : ನೊಂದಾಯಿತ ಕಟ್ಟಡ ಕಾರ್ಮಿಕರೇ ಗಮನಿಸಿ : ಉಚಿತ ಬಸ್ ಪಾಸ್ ಗಾಗಿ ಅರ್ಜಿ ಆಹ್ವಾನ
ಈ ಕುರಿತಂತೆ ಉನ್ನತ ಶಿಕ್ಷಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿ ಹೊರಡಿಸಿದ್ದು, ಯುಜಿಸಿಯಿಂದ ಕರ್ನಾಟಕ ರಾಜ್ಯದ ಪರವಾಗಿ 3 ಕೆ-ಸೆಟ್ ಪರೀಕ್ಷೆಗಳನ್ನು ನಡೆಸಲು ಮೈಸೂರು ವಿಶ್ವವಿದ್ಯಾಲಯಕ್ಕೆ ( Mysore University ) ಮಾನ್ಯತೆಯನ್ನು ನೀಡಲು ನಿರ್ಧರಿಸಿ, 41 ವಿಷಯಗಳಲ್ಲಿ ದಿನಾಂಕ 14-01-2020ರಿಂದ 03 ವರ್ಷಗಳವರೆಗೆ ಪ್ರತಿ ಒಂದು ವರ್ಷಕ್ಕೆ ಒಂದು ಬಾರಿಗೆ ಕೆ-ಸೆಟ್ ಪರೀಕ್ಷೆಯನ್ನು ನಡೆಸಲು ಮಾನ್ಯತೆ ನೀಡಿರುತ್ತದೆ ಎಂದಿದ್ದಾರೆ.
2022ನೇ ಶೈಕ್ಷಣಿಕ ಸಾಲಿನಲ್ಲಿ ಆಯಾ ರಾಜ್ಯ ಸರ್ಕಾರಗಳು ಗುರುತಿಸಿರುವ ರಾಜ್ಯ ನೋಡೆಲ್ ಏಜೆನ್ಸಿಗಳಿಗೆ ಯುಜಿಸಿಯಿಂದ ಮಾನ್ಯತೆ ಅಗತ್ಯವಿರುವ ಕೆ ಎಸ್ ಪರೀಕ್ಷೆಯನ್ನು ನಡೆಸಲು ಮೈಸೂರು ವಿವಿಗೆ ಅನುಮತಿ ನೀಡಿರುತ್ತದೆ ಎಂದು ಹೇಳಿದ್ದಾರೆ.
BIGG NEWS : ಸಾಮಾಜಿಕ ಭದ್ರತೆ ಯೋಜನೆಗಳಡಿ ಮಾಸಾಶನ ಪಡೆಯುತ್ತಿರುವವರಿಗೆ ಇಲ್ಲಿದೆ ಮುಖ್ಯ ಮಾಹಿತಿ
ಜುಲೈ-2021ರಲ್ಲಿ ಮೈಸೂರು ವಿವಿಯಿಂದ ನಡೆದಂತ ಕೆ-ಸೆಟ್ ಪರೀಕ್ಷೆಯಲ್ಲಿ ( K-SET Exam ) ಅವ್ಯವಹಾರ ನಡೆದಿದೆ ಎಂದು, ಪರೀಕ್ಷೆಯ ಸಂಯೋಜಕರು ಹಾಗೂ ಇತರರು ಸಂಪೂರ್ಣ ಹೊಣೆಗಾರರೆಂದು ದೂರುಗಳು ಬಂದಿದ್ದವು. ಈ ಹಿನ್ನಲೆಯಲ್ಲಿ ಕೆ-ಸೆಟ್ ಪರೀಕ್ಷೆಯನ್ನು ಸ್ವತಂತ್ರ ಸಂಸ್ಥೆ ನಡೆಸುವುದು ಸೂಕ್ತವೆಂದು ಮನಗಂಡು, ಕೆಇಎ ಮೂಲಕ ನಡೆಸು ತೀರ್ಮಾನಿಸಿದೆ.
ಈ ಹಿನ್ನಲೆಯಲ್ಲಿ ಯುಜಿಸಿಯಿಂದ ( UGC ) ಮಾನ್ಯತೆ ಅಗತ್ಯವಿರುವ ರಾಜ್ಯ ಅರ್ಹತಾ ಪರೀಕ್ಷೆಯನ್ನು ನಡೆಸಲು ಯುಜಿಸಿಯ ಪರಿಕಲ್ಪನೆ ಮತ್ತು ವ್ಯಾಪ್ತಿಯಡಿ ರಾಜ್ಯ ಸರ್ಕಾರವು ಒಂದು ಏಜೆನ್ಸಿಯನ್ನು ಗುರುತಿಸಬಹುದು. ಅದು ವಿಶ್ವವಿದ್ಯಾನಿಯವಾಗಿರಬಹುದು ಅಥವಾ ಪ್ರತಿಷ್ಠಿತ ಪರೀಕ್ಷಾ ಸಂಸ್ಥೆ ಅಥವಾ ಉನ್ನತ ಶಿಕ್ಷಣಕ್ಕಾಗಿ ಶಿಕ್ಷಕರ ನೇಮಕಾತಿಗೆ ಸಂಬಂಧಿಸದ ಪ್ರತಿಷ್ಠಿತ ಸಂಸ್ಧೆಯಾಗಿರಬಹುದೆಂಬ ಅವಕಾಶದಡಿ 2022ನೇ ಸಾಲನ್ನು ಒಳಗೊಂಡಂತೆ ಮುಂದಿನ ಆದೇಶದವರೆಗೆ ಕೆ-ಸೆಟ್ ಪರೀಕ್ಷೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA)ದ ಮೂಲಕ ನಡೆಸುವಂತೆ ಆದೇಶಿಸಿದ್ದಾರೆ.
ವರದಿ: ವಸಂತ ಬಿ ಈಶ್ವರಗೆರೆ