ಮೈಸೂರು : ನಾಳೆ ಸೆ.26 ರಂದು ಚಾಮುಂಡಿ ಬೆಟ್ಟದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಮೈಸೂರು ದಸರಾಗೆ ಚಾಲನೆ ನೀಡಲಿದ್ದು, ಈ ಹಿನ್ನೆಲೆ ಇಂದು ಬೆಳಗ್ಗೆ 11:30 ರವರೆಗೆ ಸಾರ್ವಜನಿಕರಿಗೆ ಚಾಮುಂಡೇಶ್ವರಿ ದರ್ಶನ ನಿರ್ಬಂಧಿಸಲಾಗಿದೆ.
BIGG NEWS : ವಿಶ್ವವಿಖ್ಯಾತ ನಾಡಹಬ್ಬ ದಸರಾಗೆ ಕ್ಷಣಗಣನೆ : ಇಂದು ನಡೆಯಲಿರುವ ಕಾರ್ಯಕ್ರಮದ ಸಂಪೂರ್ಣ ವಿವರ ಇಲ್ಲಿದೆ
ಈ ಬಗ್ಗೆ ಮೈಸೂರು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಪ್ರಕಟಣೆ ಹೊರಡಿಸಿದ್ದು, ದಸರಾ ಉದ್ಘಾಟನೆ ಹಿನ್ನೆಲೆ ಇಂದು ಬೆಳಗ್ಗೆ 11:30 ರವರೆಗೆ ಸಾರ್ವಜನಿಕರಿಗೆ ಚಾಮುಂಡೇಶ್ವರಿ ದೇವಿ ದರ್ಶನ ನಿರ್ಬಂಧಿಸಲಾಗಿದೆ ಎಂದು ಆದೇಶ ಹೊರಡಿಸಿದ್ದಾರೆ.ಚಾಮುಂಡಿ ಬೆಟ್ಟದಲ್ಲಿ ಸಾರ್ವಜನಿಕರಿಗೆ ದೇವರ ದರ್ಶನಕ್ಕೆ ನಿರ್ಬಂಧ ಹೇರಲಾಗಿದೆ. ಬೆಳಗ್ಗೆಯಿಂದ 11.30ರವರೆಗೆ ಸಾರ್ವಜನಿಕರಿಗೆ ಚಾಮುಂಡೇಶ್ವರಿ ದೇವಸ್ಧಾನದಲ್ಲಿ ದೇವರ ದರ್ಶನ ಸಿಗುವುದಿಲ್ಲ. ಕಾರ್ಯಕ್ರಮ ಮುಗಿದ ನಂತರ ಎಂದಿನಂತೆ ದೇವರ ದರ್ಶನಕ್ಕೆ ಅವಕಾಶ ನೀಡಲಾಗುತ್ತೆ.
BIG NEWS: ʻಗುಲಾಂ ನಬಿ ಆಜಾದ್ʼ ಇಂದು ತಮ್ಮ ಹೊಸ ರಾಜಕೀಯ ಪಕ್ಷ ಘೋಷಿಸುವ ಸಾಧ್ಯತೆ | Ghulam Nabi Azad
ಅದೇ ರೀತಿ ರಾಷ್ಟ್ರಪತಿಯವರ ದಸರಾ ಉದ್ಘಾಟನೆ ಕಾರ್ಯಕ್ರಮಕ್ಕೆ ಸಾರ್ವಜನಿಕರು ಎಂದಿನಂತೆ ಭಾಗವಹಿಸಬಹುದು ಹಾಗೂ ಕಾರ್ಯಕ್ರಮ ಮುಗಿದ ಬಳಿಕ ದೇವಿ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ ಎಂದು ಅವರು ಮಾಹಿತಿ ನೀಡಿದ್ದಾರೆ.