ಬೆಂಗಳೂರು : ರಾಜ್ಯದ ಎಲ್ಲ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ರಾಷ್ಟ್ರೀಯ ಅವಿಷ್ಕಾರ್ ಅಭಿಯಾನ ಕಾರ್ಯಕ್ರಮದಡಿ ರಸಪ್ರಶ್ನೆ ಆಯೋಜಿಸುವಂತೆ ಸಮಗ್ರ ಶಿಕ್ಷಣ ಕರ್ನಾಟಕ ರಾಜ್ಯ ಯೋಜನಾ ನಿರ್ದೇಶಕರು ಸೂಚನೆ ನೀಡಿದ್ದಾರೆ.
ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಸ್ಪರ್ಧೆಯನ್ನು ಆಯೋಜಿಸುವ ಮೂಲಕ ಮಕ್ಕಳಲ್ಲಿ ಗಣಿತ, ವಿಜ್ಞಾನ, ತಂತ್ರಜ್ಞಾನ, ಸಾಮಾನ್ಯ ಜ್ಞಾನ, ಭಾಷೆ, ದೇಶದ ಪರಂಪರೆ ಮತ್ತು ವಿವಿಧ ವಿಷಯಗಳಲ್ಲಿ ಅರಿವಿನ ಮಟ್ಟವನ್ನು ಹೆಚ್ಚಿಸಲು ಕಲಿಕೆಯಲ್ಲಿ ಆಸಕ್ತಿ ಮೂಡಿಸಲು ಕಾರ್ಯ ಕ್ರಮವು ಪೂರಕವಾಗಿದೆ ಎಂದು ತಿಳಿಸಿದ್ದಾರೆ.
ಜನವರಿ 10 ರಿಂದ ಫೆಬ್ರವರಿ 24 ರವರೆಗೆ ಸ್ಪರ್ಧೆಗಳನ್ನು ವಿವಿಧ ಹಂತಗಳಲ್ಲಿ ನಡೆಸಲು ಸೂಚನೆ ನೀಡಲಾಗಿದೆ. ತಾಲೂಕು, ವಿಭಾಗ ಮತ್ತು ರಾಜ್ಯ ಮಟ್ಟದಲ್ಲಿ ಸ್ಪರ್ಧೆಯನ್ನು 5 ರಿಂದ 7 (ಜೂನಿಯರ್ ವಿಭಾಗ) 8ರಿಂದ 10 ನೇ ತರಗತಿ (ಸೀನಿಯರ್ ವಿಭಾಗ) ಮಕ್ಕಳಿಗೆ 2 ಹಂತದಲ್ಲಿ ಆಯೋಜಿಸುವಂತೆ ಸೂಚಿಸಿದ್ದಾರೆ.