ಚಿಕ್ಕಬಳ್ಳಾಪುರ : ಎಲ್ಲಾ ಪಡಿತರ ಚೀಟಿದಾರರು ನ್ಯಾಯಬೆಲೆ ಅಂಗಡಿಗಳಲ್ಲಿ ಸೆಪ್ಟೆಂಬರ್-2022 ರ ಮಾಹೆಯಿಂದ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯ ಅನ್ನ ಭಾಗ್ಯ ಮತ್ತು ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಗಳ ಪಡಿತರ ಆಹಾರಧಾನ್ಯಗಳನ್ನು ವಿತರಿಸುವ ಸಂದರ್ಭದಲ್ಲಿ ಎರಡು ಯೋಜನೆಗಳಿಗೆ ಯೋಜನೆವಾರು ಪ್ರತ್ಯೇಕವಾಗಿ ಆಧಾರ್ ಬಯೋ ದೃಢೀಕರಣ ಪಡೆಯುವಂತೆ ಆಹಾರ ಇಲಾಖೆಯ ತಂತ್ರಾಂಶದಲ್ಲಿ ಮಾರ್ಪಾಡು ಮಾಡಲಾಗಿರುತ್ತದೆ.
BREAKING NEWS : ಬಿಜೆಪಿ ಮುಖಂಡನ ಹನಿ ಟ್ರ್ಯಾಪ್ ಪ್ರಕರಣ : ಮಂಡ್ಯ ಪೊಲೀಸರಿಂದ ಮತ್ತೊಬ್ಬ ಆರೋಪಿ ಅರೆಸ್ಟ್
ಈ ಸಂಬಂಧ ಜಿಲ್ಲೆಯ ಪಡಿತರ ಚೀಟಿದಾರರು ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ಆಹಾರಧಾನ್ಯಗಳನ್ನು ಪಡೆಯುವ ಸಂದರ್ಭದಲ್ಲಿ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯ ಅನ್ನ ಭಾಗ್ಯ ಮತ್ತು ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಗಳಿಗೆ ಯೋಜನೆವಾರು ಪ್ರತ್ಯೇಕವಾಗಿ (ಎರಡು ಬಾರಿ) ಆಧಾರ್ ಬಯೋ ದೃಢೀಕರಣ ನೀಡಿ ಪಡಿತರ ಆಹಾರಧಾನ್ಯಗಳನ್ನು ಪಡೆಯುವಂತೆ ಪಡಿತರ ಚೀಟಿದಾರರಲ್ಲಿ ಮನವಿ ಮಾಡಲಾಗಿದೆಯೆಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
BIG NEWS: ಅಯೋಧ್ಯೆ ʻರಾಮ ಮಂದಿರʼ ನಿರ್ಮಾಣಕ್ಕೆ 1800 ಕೋಟಿ ರೂ. ವೆಚ್ಚ: ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ