ಬೆಂಗಳೂರು : ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು ಎಸ್ಎಸ್ ಎಲ್ ಸಿ ಪರೀಕ್ಷೆ ಸಂಬಂಧ ಮಾರ್ಗಸೂಚಿ ಪ್ರಕಟಿಸಿದ್ದು, ಈ ಬಾರಿ ಪೂರ್ಣ ಕೋವಿಡ್ ಪೂರ್ವ ಮಾದರಿಯಲ್ಲಿ ಪರೀಕ್ಷೆ ನಡೆಯಲಿದೆ ಎಂದು ತಿಳಿಸಿದೆ.
BIGG NEWS : ನಾಡಗೀತೆ ಕಾಲಮಿತಿ, ಧಾಟಿ ಬಗ್ಗೆ ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ
ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು 2022-23 ನೇ ಸಾಲಿನ ಎಸ್ಎಸ್ಎಲ್ ಸಿ ಪರೀಕ್ಷೆಯು 2023 ರ ಮಾರ್ಚ್-ಏಪ್ರಿಲ್ ನಲ್ಲಿ ನಡೆಯಲಿದ್ದು, ಮುಂದಿನ ವಾರದಿಂದ ಪರೀಕ್ಷಾ ನೋಂದಣಿ ಪ್ರಕ್ರಿಯೆ ಆರಂಭಿಸಲಾಗುವುದು. ಪರಿಷ್ಕೃತ ಪಠ್ಯಕ್ರಮದ ಅನುಸಾರ ಪ್ರಶ್ನೆ ಪತ್ರಿಕೆ ಸಿದ್ಧಪಡಿಸಲಾಗುತ್ತದೆ ಎಂದು ತಿಳಿಸಿದೆ.
ಮಾರ್ಚ್-ಏಪ್ರಿಲ್ ನಲ್ಲಿ ಪರೀಕ್ಷೆ ನಡೆಯಲಿದ್ದು, ಮಕ್ಕಳು ವಿಸ್ತೃತ ಉತ್ತರ ಬರೆಯುವ ಪ್ರಶ್ನೆ ಪತ್ರಿಕೆ ಇರಲಿದೆ. ವಿದ್ಯಾರ್ಥಿಗಳಿಗೆ ಶೇ. 75 ರಷ್ಟು ಹಾಜರಾತಿ ಕಡ್ಡಾಯಗೊಳಿಸಲಾಗಿದೆ ಎಂದು ಮಾಹಿತಿ ನೀಡಿದೆ.