ಕೊಪ್ಪಳ : ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ಸಹಾಯಧನ ಪಡೆಯುತ್ತಿರುವ ರೈತರು ತಮ್ಮ ಬ್ಯಾಂಕ್ ಖಾತೆಗೆ ಇ-ಕೆವೈಸಿ ಮಾಡಿಸಿಕೊಳ್ಳಬೇಕು ಎಂದು ಕೊಪ್ಪಳ ಸಹಾಯಕ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.
BIGG NEWS : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ : ಇಂದು ಸುಳ್ಯ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ಕೇಂದ್ರ ಸರ್ಕಾರದಿಂದ ತಮ್ಮ ಬ್ಯಾಂಕ್ ಖಾತೆಗಳಿಗೆ ಸಹಾಯಧನ ಪಡೆಯುತ್ತಿರುವ ಕೊಪ್ಪಳ ತಾಲೂಕಿನ ರೈತ ಭಾಂದವರು ತಮ್ಮ ಸಮೀಪದ ಕಾಮನ್ ಸರ್ವೀಸ್ ಸೆಂಟರ್ಗೆ ಭೇಟಿ ನೀಡಿ, ತಮ್ಮ ಬ್ಯಾಂಕ್ ಖಾತೆಗೆ ಇ-ಕೆವೈಸಿ ಮಾಡಿಸಿಕೊಳ್ಳಬೇಕು ಅಥವಾ ಸ್ಮಾರ್ಟ್ಪೋನ್ ಬಳಸುತ್ತಿರುವ ರೈತರು ಪಿ.ಎಂ ಕಿಸಾನ್ ತಂತ್ರಾಂಶದ ಮುಖಾಂತರ ಇ-ಕೆವೈಸಿ ಮಾಡಿಸಿಕೊಳ್ಳಬಹುದಾಗಿದೆ. ಒಂದು ವೇಳೆ ಇ-ಕೆವೈಸಿ ಮಾಡಿಸಿಕೊಳ್ಳದಿದ್ದರೆ ಮುಂಬರುವ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ ಸಹಾಯಧನವು ತಮಗೆ ಸಂದಾಯವಾಗುವುದಿಲ್ಲ ಎಂದು ಪ್ರಕಟಣೆ ತಿಳಿಸಿದೆ.
BIGG NEWS: ಕೇರಳದಲ್ಲಿ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದ ಶಿಕ್ಷಕನಿಗೆ 79 ವರ್ಷ ಕಠಿಣ ಜೈಲು ಶಿಕ್ಷೆ