ಹೊಸಪೇಟೆ : ಕೇಂದ್ರ ಸರ್ಕಾರದ ಪಿ.ಎಂ.ಕಿಸಾನ್ ಯೋಜನೆಯಡಿ ನೋಂದಾಯಿತ ಅರ್ಹ ಫಲಾನುಭವಿಗಳು ಕಡ್ಡಾಯವಾಗಿ ಇ-ಕೆವೈಸಿ ಮಾಡಿಕೊಳ್ಳಬೇಕು ಎಂದು ವಿಜಯನಗರ ಜಿಲ್ಲೆಯ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
BIGG NEWS : ಅತಿವೃಷ್ಟಿಯಿಂದ ಮನೆಹಾನಿ ಸಂತ್ರಸ್ತರಿಗೆ 24 ಗಂಟೆಯಲ್ಲಿ ಪರಿಹಾರ : ಸಚಿವ ಗೋವಿಂದ ಕಾರಜೋಳ
ಕೃಷಿ ಇಲಾಖೆ ಸೂಚಿಸಿದ ಫಲಾನುಭವಿಗಳುhttps://pmkisan.gov.inಗೆ ಭೇಟಿ ನೀಡಿ ಇ-ಕೆವೈಸಿ ಆಯ್ಕೆ ಕ್ಲಿಕ್ ಮಾಡಿ ಆಧಾರ್ ಸಂಖ್ಯೆ ನಮೂದಿಸಿ, ಬಳಿಕ ಆಧಾರ್ಗೆ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆ ನಮೂದಿಸಬೇಕು. ಮೊಬೈಲ್ ಸಂಖ್ಯೆಗೆ ಬರುವ ಒಟಿಪಿ ನಮೂದಿಸಿ ಪ್ರಕ್ರಿಯೆ ಇ-ಕೆವೈಸಿ ಪೂರ್ಣಗೊಳಿಸಬೇಕು. ಆಧಾರ್ ಸಂಖ್ಯೆಗೆ ಮೊಬೈಲ್ ನಂಬರ್ ಜೋಡಣೆಯಾಗದ ರೈತರು ಅಥವಾ ಒಟಿಪಿ ಸೃಜನೆಯಾಗದ ರೈತರು ಹತ್ತಿರದ ಗ್ರಾಮ ಪಂಚಾಯತಿಯಲ್ಲಿ ಹೊಸದಾಗಿ ಕಾರ್ಯನಿರ್ವಹಿಸುತ್ತಿರುವ ಗ್ರಾಮ ಒನ್ ಸೇವಾ ಕೇಂದ್ರಗಳಲ್ಲಿ ಅಥವಾ ಸೈಬರ್ಗಳಲ್ಲಿ ಇ-ಕೆವೈಸಿ ಮಾಡಲು ಅವಕಾಶವಿರುತ್ತದೆ.
ಆದ್ದರಿಂದ ಜಿಲ್ಲೆಯ ಪ್ರತಿಯೊಬ್ಬ ಫಲಾನುಭವಿ ರೈತರು ಆ.15ರೊಳಗೆ ಇ-ಕೆವೈಸಿ ಮಾಡಿಸಬೇಕು. ಹೆಚ್ಚಿನ ಮಾಹಿತಿಗಾಗಿ ನಿಮ್ಮ ಸಮೀಪದ ರೈತ ಸಂಪರ್ಕ ಕೇಂದ್ರ, ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಹಾಗೂ ತಾಲೂಕು ಕಚೇರಿ ಆವರಣದ ಜಂಟಿ ಕೃಷಿ ನಿರ್ದೇಶಕರ ಕಚೇರಿ ಹಾಗೂ ದೂ.08394-200240ಗೆ ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.