ಬೆಂಗಳೂರು: ಕೇಂದ್ರ ಸರ್ಕಾರದ ಆಯುಷ್ಮಾನ್ ಭಾರತ್ ಆರೋಗ್ಯ ವಿಮಾ ಯೋಜನೆಯಡಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ, ದೇವನಹಳ್ಳಿ, ಹೊಸಕೋಟೆ, ನೆಲಮಂಗಲ ತಾಲ್ಲೂಕುಗಳಲ್ಲಿನ ಕೈಮಗ್ಗ ಮತ್ತು ವಿದ್ಯುತ್ ಮಗ್ಗಗಳಲ್ಲಿ ನೇಯ್ಗೆ ವೃತ್ತಿ ಮಾಡುತ್ತಿರುವ ನೇಕಾರರು ಯೋಜನೆಯ ಪ್ರಯೋಜನ ಪಡೆಯಲು ಹಾಗೂ ನೋಂದಾಣಿಗೆ ಅವಕಾಶ ಕಲ್ಪಿಸಲಾಗಿದೆ.
ಕೈಮಗ್ಗ ಮತ್ತು ವಿದ್ಯುತ್ ಮಗ್ಗ ನೇಯ್ಗೆ ವೃತ್ತಿಯನ್ನು ಅವಲಂಬಿಸಿರುವ ಬಿ.ಪಿ.ಎಲ್. ಕುಟುಂಬದ ನೇಕಾರರನ್ನು ಈ ಯೋಜನೆಯಡಿ ನೋಂದಾಯಿಸಲು ಜಿಲ್ಲಾ ಆರೋಗ್ಯ ಅಧಿಕಾರಿಗಳ ಕಚೇರಿ/ ಜಿಲ್ಲಾ ಶಸ್ತ್ರ ಚಿಕಿತ್ಸಾ ಆರೋಗ್ಯ ಅಧಿಕಾರಿಗಳ ಕಚೇರಿ/ ಗ್ರಾಮ ಒನ್ ಕೇಂದ್ರಗಳಿಗೆ ಭೇಟಿ ನೀಡಿ ಆಯುಷ್ಮಾನ್ ಭಾರತ್ ಆರೋಗ್ಯ ವಿಮಾ ಯೋಜನೆಯಡಿ ನೋಂದಾಯಿಸಲು ಕೋರಿದೆ.
ಹೆಚ್ಚಿನ ಮಾಹಿತಿಗಾಗಿ ಉಪ ನಿದೇಶಕರ ಕಛೇರಿ,ಕೈಮಗ್ಗ ಮತ್ತು ಜವಳಿ ಇಲಾಖೆ, ಗಾರ್ಮೆಂಟ್ಸ್ ತರಬೇತಿ ಕೇಂದ್ರದ ಕಟ್ಟಡ, ಕೆಐಎಡಿಬಿ ಅಪೇರಲ್ ಪಾರ್ಕ್, ದೊಡ್ಡಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಈ ಕಛೇರಿಯನ್ನು ಸಂಪರ್ಕಿಸಬಹುದುದಾಗಿದೆ ಎಂದು ಕೈಮಗ್ಗ ಮತ್ತು ಜವಳಿ ಇಲಾಖೆಯ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಪನಿರ್ದೇಶಕರಾದ ಸೌಮ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.