ಮಂಗಳೂರು: ಸುರತ್ಕಲ್ ಕಾಟಿಪಳ್ಳದಲ್ಲಿ ನಡೆದ ಅಬ್ದುಲ್ ಜಲೀಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಸಿಲಾಗಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಹೇಳಿದ್ದಾರೆ.
ತಿರುಪತಿ ತಿಮ್ಮಪ್ಪನ ಭಕ್ತರಿಗೆ ಬಿಗ್ ಶಾಕ್: 2023ರಲ್ಲಿ ವೆಂಕಟೇಶ್ವರನ ಗರ್ಭಗುಡಿ 8 ತಿಂಗಳ ಕಾಲ ಬಂದ್.?
ಈ ಕುರಿತು ಮಾಹಿತಿ ನೀಡಿರುವ ಅವರು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದೇವೆ. ಕೃಷ್ಣಾಪುರ ನೈತಂಗಡಿ ನಿವಾಸಿ ಶೈಲೇಶ್ ಅಲಿಯಾಸ್ ಶೈಲೇಶ್ ಪೂಜಾರಿ, ಉಡುಪಿ ಜಿಲ್ಲೆ, ಹೆಜಮಾಡಿ ನಿವಾಸಿ ಸವಿನ್ ಕಾಂಚನ್, ಕಾಟಿಪಳ್ಳ ನಿವಾಸಿ ಪವನ್ ಅಲಿಯಾಸ್ ಪಚ್ಚು ಬಂಧಿತರು. ಶೈಲೇಶ್ ಮತ್ತು ಸವಿನ್ ಕೊಲೆ ಮಾಡಿದರೆ ಪವನ್ ಕೊಲೆ ಮಾಡಿದವರಿಗೆ ಬೈಕ್ನಲ್ಲಿ ಡ್ರಾಪ್ ಕೊಟ್ಟಿದ್ದಾನೆ. ಮತ್ತೋರ್ವ ಆರೋಪಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.
ಅದರಲ್ಲಿ ಇಬ್ಬರು ಈ ಕೃತ್ಯದಲ್ಲಿ ಭಾಗಿಯಾಗಿದ್ದವರು. ಒಬ್ಬ ಬೈಕ್ನಲ್ಲಿ ಕರೆತಂದು ಇಬ್ಬರನ್ನು ಡ್ರಾಪ್ ಮಾಡಿದ್ದ. ಕೊಲೆಗೆ ಕಾರಣವಾದ ಅಂಶಗಳ ಬಗ್ಗೆ ತನಿಖೆ ನಡೆಸುತ್ತಿದ್ದೇವೆ. ಮೂವರಲ್ಲಿ ಇಬ್ಬರು ಈ ಹಿಂದೆ ಹಲವು ಪ್ರಕರಣಗಳಲ್ಲಿ ಮತ್ತು 2021ರಲ್ಲಿ ನಡೆದ ಕೊಲೆ ಯತ್ನ ಪ್ರಕರಣದಲ್ಲಿ ಭಾಗಿಯಾಗಿದ್ದರು. ಸದ್ಯ ಅವರನ್ನು ನ್ಯಾಯಾಲಯಕ್ಕೆ ಹಾಜರು ಮಾಡಿದ್ದೇವೆ. 14 ದಿನ ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆ ನಡೆಸಲಾಗುತ್ತದೆ ಎಂದರು. ಗುರುತು ಪತ್ತೆ ಆಗೋವರೆಗೂ ಆರೋಪಿಗಳ ಮಾಹಿತಿ ಹೇಳಲು ಆಗಲ್ಲ. ಹೆಚ್ಚಿನ ವಿಚಾರಣೆ ಮಾಡುತ್ತೇವೆ. ಕೊಲೆಗೆ ಕಾರಣ ಏನು ಅನ್ನೋದನ್ನ ಪೂರ್ಣ ತನಿಖೆ ನಂತರ ಹೇಳುತ್ತೇವೆ ಎಂದರು.