ಮಂಡ್ಯ : ಮಂಡ್ಯ ಜಿಲ್ಲೆಯ ಕೆ.ಆರ್ ಪೇಟೆಯಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸಚಿವ ಕೆ.ಸಿ. ನಾರಾಯಣಗೌಡ ಹಾಗೂ ಜೆಡಿಎಸ್ ಮುಖಂಡ ಸಂತೋಷ್ ನಡುವೆ ಕಾರ್ಯಕ್ರಮದ ವೇದಿಕೆಯಲ್ಲೇ ಮಾತಿನ ಚಕಮಕಿ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆಯಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು.ಕಾರ್ಯಕ್ರಮದಲ್ಲಿ ಕಾರ್ಯಕ್ರಮದಲ್ಲಿ ಸಚಿವ ಕೆ.ಸಿ.ನಾರಾಯಣಗೌಡ ಹಾಗೂ ಜೆಡಿಎಸ್ ಪುರಸಭೆ ಸದಸ್ಯ ಬಸ್ ಸಂತೋಷ್, ಸೇರಿದಂತೆ ಹಲವು ಗಣ್ಯರು ಭಾಗಿಯಾಗಿದ್ದರು.
ಜೆಡಿಎಸ್ ಮುಖಂಡ ಬಸ್ ಸಂತೋಷ್ ವೇದಿಕೆ ಮೇಲೆ ಭಾಷಣ ಮಾಡುತ್ತಿದ್ದ ಸಂದರ್ಭದಲ್ಲಿ, ಕ್ಷೇತ್ರದಲ್ಲಿ ಭ್ರಷ್ಟಾಚಾರ ಹೆಚ್ಚಾಗುತ್ತಿದೆ. ಇದಾದ ಬಳಿಕ ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಅಲಿಬಾಬಾ ಕಥೆ ಹೇಳುವ ಮೂಲಕ ಪರೋಕ್ಷವಾಗಿ ನಾರಾಯಣಗೌಡರ ವಿರುದ್ಧ ವಾಗ್ದಾಳಿ ನಡೆಸಿದರು.
ಕಥೆ ಕೇಳುತ್ತಿದ್ದಂತೆ ಕೋಪಗೊಂಡ ನಾರಾಯಣ ಗೌಡರು ವೇದಿಕೆ ಮೇಲೆ ಆಕ್ರೋಶ ಹೊರ ಹಾಕಿದರು. ಭ್ರಷ್ಟಾಚಾರದ ಬಗ್ಗೆ ಮಾತನಾಡೋಕೆ ನೀನು ಯಾರು? ಯಾರು ಭ್ರಷ್ಟಾಚಾರ ಮಾಡಿದ್ದಾರೆ ಎಂದು ಸ್ಪಷ್ಟನೆ ಕೊಡುಬೇಕು ಎಂದು ವೇದಿಕೆಯಲ್ಲೇ ಮೈಕ್ ಕಸೀದುಕೊಂಡು ನಾರಾಯಣಗೌಡ ಪಟ್ಟು ಹಿಡಿದರು. ಸಚಿವ ನಾರಾಯಣಗೌಡ ಕೆಂಡಾಮಂಡಲರಾಗ್ತಿದ್ದಂತೆ ವೇದಿಕೆಯಲ್ಲಿದ್ದ ಗಣ್ಯರು ಸಮಾಧಾನಪಡಿಸಿ ಪರಿಸ್ಥಿತಿ ತಿಳಿಗೊಳಿಸಿದರು.