ನವದೆಹಲಿ ; ಕರ್ನಾಟಕದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲಿದೆ. ಯಾರು ಮುಖ್ಯಮಂತ್ರಿ ಆಗ್ತಾರೆ ಅನ್ನೋದು ಅಪ್ರಸ್ತುತ ಎಂದು ಬಿಜೆಪಿ ಶಾಸಕ ಎಂ.ಪಿ. ರೇಣುಕಾಚಾರ್ಯ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಹ್ಲಾದ್ ಜೋಶಿ ಅವರು ಪಕ್ಷದ ಅಧ್ಯಕ್ಷರಾಗಿ ಸಂಘಟನೆ ಮಾಡಿದವರು. ಹಿಂದುಳಿದ ವರ್ಗದ ನರೇಂದ್ರ ಮೋದಿ ಅವರು ಪ್ರಧಾನಿಯಾಗಿದ್ದಾರೆ. ನಮ್ಮ ಪಕ್ಷದ ಬಗ್ಗೆ ಮಾತನಾಡಲು ಕುಮಾರಸ್ವಾಮಿ ಯಾರು? ಎಂದು ವಾಗ್ದಾಳಿ ನಡೆಸಿದ್ದಾರೆ.
ಕುಮಾರಸ್ವಾಮಿ ಅವರು ಎರಡು ಬಾರಿ ಆಕಸ್ಮಿಕವಾಗಿ ಸಿಎಂ ಆದವರು. ಹೆಚ್.ಡಿ.ಕುಮಾರಸ್ವಾಮಿ ಸಿಎಂ ಆಗಿ ಅಧಿಕಾರವನ್ನು ಅನುಭವಿಸಿದ್ದಾರೆ. ಈಗ ಜೆಡಿಎಸ್ ಕಥೆ ಮುಗತ್ತಿಯುತ್ತಿದ್ದು, ಹತಾಶರಾಗಿದ್ದಾರೆ. ಕೆಲವೇ ದಿನಗಳಲ್ಲಿ ಜೆಡಿಎಸ್ ಪಕ್ಷ ಎರಡು ಭಾಗವಾಗಲಿದೆ. ಕುಮಾರಸ್ವಾಮಿ ಬಣ, ಭವಾನಿ ರೇಣಣ್ಣ ಬಣವಾಗಲಿದೆ. ಇದೀಗ ಜೆಡಿಎಸ್ ಪಕ್ಷ ಹೆಚ್.ಡಿ.ಕುಮಾರಸ್ವಾಮಿ ನಿಯಂತ್ರಣದಲ್ಲಿ ಇಲ್ಲ ಎಂದರು.
BIGG NEWS: ಬೆಂಗಳೂರು ಜನರೇ ಗಮನಿಸಿ…!; ನಗರದ ಹಲವು ಕಡೆ ಫೆ 9ರವರೆಗೆ ವಿದ್ಯುತ್ ವ್ಯತ್ಯಯ