ನವದೆಹಲಿ : 2007ರಲ್ಲಿ ನಡೆದ ಚೊಚ್ಚಲ ಆವೃತ್ತಿಯ ಐಸಿಸಿ ಟಿ20 ಕ್ರಿಕೆಟ್ ವಿಶ್ವಕಪ್ ಟೂರ್ನಿಯಲ್ಲಿ ಟೀಮ್ ಇಂಡಿಯಾ ಪಾಕಿಸ್ತಾನ ತಂಡವನ್ನು ರೋಚಕ ಫೈನಲ್ ಪಂದ್ಯದಲ್ಲಿ ಮಣಿಸಿ ಟ್ರೋಫಿ ಗೆಲ್ಲುವಲ್ಲಿ ಪ್ರಮುಖ ಪಾತ್ರವಹಿಸಿದ್ದ ಮಧ್ಯಮ ವೇಗದ ಬೌಲರ್ ಜೋಗಿಂದರ್ ಶರ್ಮಾ ಎಲ್ಲಾ ಮಾದರಿಯ ಕ್ರಿಕೆಟ್‌ಗೆ ಶುಕ್ರವಾರ ನಿವೃತ್ತಿ ಘೋಷಿಸಿದ್ದಾರೆ.
ಈ ಕುರಿತು ಟ್ವೀಟರ್ ನಲ್ಲಿ ಮಾಹಿತಿ ನೀಡಿರುವ ಅವರು, 2002 ರಿಂದ 2017 ರವರೆಗಿನ ನನ್ನ ಪ್ರಯಾಣವು ನನ್ನ ಜೀವನದ ಅತ್ಯಂತ ಅದ್ಭುತ ವರ್ಷವಾಗಿದೆ, ಏಕೆಂದರೆ ಇದು ಕ್ರೀಡೆಯ ಅತ್ಯುನ್ನತ ಮಟ್ಟದಲ್ಲಿ ಭಾರತವನ್ನು ಪ್ರತಿನಿಧಿಸುವುದು ಒಂದು ಗೌರವವಾಗಿದೆ “ಎಂದು ನಾಲ್ಕು ಏಕದಿನ ಮತ್ತು ನಾಲ್ಕು ಟಿ 20 ಪಂದ್ಯಗಳಲ್ಲಿ ಭಾರತಕ್ಕಾಗಿ ಆಡಿದ ಶರ್ಮಾ ಟ್ವೀಟ್ ಮಾಡಿದ್ದಾರೆ.
ನನ್ನ ಎಲ್ಲಾ ತಂಡದ ಸದಸ್ಯರು, ತರಬೇತುದಾರರು, ಮಾರ್ಗದರ್ಶಕರು ಮತ್ತು ಸಹಾಯಕ ಸಿಬ್ಬಂದಿಗೆ: ನಿಮ್ಮೆಲ್ಲರೊಂದಿಗೆ ಆಡುವುದು ಸಂಪೂರ್ಣ ಗೌರವವಾಗಿದೆ, ಮತ್ತು ನನ್ನ ಕನಸನ್ನು ನನಸಾಗಿಸಲು ಸಹಾಯ ಮಾಡಿದ್ದಕ್ಕಾಗಿ ನಿಮ್ಮೆಲ್ಲರಿಗೂ ಧನ್ಯವಾದಗಳು.
ಜಂಗಿಂದರ್ ಶರ್ಮಾ ಭಾರತ ಪರ 4 ಏಕದಿನ ಮತ್ತು 4 T20 ಪಂದ್ಯಗಳನ್ನು ಆಡಿದ್ದಾರೆ. ಒಂದು ವಿಕೆಟ್ ಪಡೆದಿದ್ದಲ್ಲದೆ, ಅವರು ಏಕದಿನದಲ್ಲಿ 35 ರನ್ ಗಳಿಸಿದ್ದಾರೆ. ಟಿ20ಯಲ್ಲಿ 4 ವಿಕೆಟ್‌ಗಳನ್ನು ಪಡೆದಿದ್ದಾರೆ. ಆದರೆ ಅವರಿಗೆ ಬ್ಯಾಟಿಂಗ್ ಅವಕಾಶ ಸಿಗಲಿಲ್ಲ. ಅವರ ಪ್ರಥಮ ದರ್ಜೆ ವೃತ್ತಿಜೀವನದಲ್ಲಿ 2800ಕ್ಕೂ ಹೆಚ್ಚು ರನ್ ಗಳಿಸಿದ್ದಲ್ಲದೆ, ಅವರು 297 ವಿಕೆಟ್‌ಗಳನ್ನು ಪಡೆದಿದ್ದಾರೆ. ಇದಲ್ಲದೇ ಜೋಗಿಂದರ್ ಶರ್ಮಾ ಚೆನ್ನೈ ಸೂಪರ್ ಕಿಂಗ್ಸ್ ಪರ 16 ಐಪಿಎಲ್ ಪಂದ್ಯಗಳನ್ನೂ ಆಡಿದ್ದಾರೆ.
Announced retirement from cricket Thanks to each and everyone for your love and support 🙏❤️👍👍 pic.twitter.com/A2G9JJd515
— Joginder Sharma 🇮🇳 (@MJoginderSharma) February 3, 2023