ಬೆಳಗಾವಿ : ಬೆಳಗಾವಿಯ ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ಕಲಾಪದಲ್ಲಿ ರಾಜ್ಯ ಸರ್ಕಾರವು ಕರ್ನಾಟಕ ಭೂ ಕಂದಾಯ (ಎರಡನೇ ತಿದ್ದುಪಡಿ) ವಿಧೇಯಕವನ್ನು ಮಂಡಿಸಿದೆ.
ಕಂದಾಯ ಸಚಿವ ಆರ್. ಅಶೋಕ್ ಅವರು, ಕರ್ನಾಟಕ ಭೂ ಕಂದಾಯ ವಿಧೇಯಕ ಮಂಡಿಸಿದ್ದಾರೆ. ಈ ಮೂಲಕ ಕಟ್ಟಡ ನಿರ್ಮಾಣ ಮಾಡಲು ಭೂಮಿ ಪರಿವರ್ತನೆಗಾಗಿ ಈ ಮೊದಲು 5-6 ತಿಂಗಳು ಸಮಯಯ ತೆಗೆದುಕೊಳ್ಳುತ್ತಿತ್ತು. ಇದನ್ನು ಏಳು ದಿನಗಳಲ್ಲಿ ಮಾಡಿಕೊಡಲು ಈ ವಿಧೇಯಕ ಮಂಡಿಸಲಾಗಿದೆ.
ರೈತರು ವ್ಯವಸಾಯ ಉದ್ದೇಶಕ್ಕೆ ಬಳಕೆ ಮಾಡಿಕೊಂಡಿದ್ದ ದಾಖಲೆ ರಹಿತ ಜಮೀನುಗಳಿಗೆ ಭೂಮಿ ಮಂಜೂರು ಮಾಡುವ ಮೂಲಕ ಭೂ ಕಬಳಿಕೆ ಹಣೆಪಟ್ಟಿಯಿಂದ ರೈತರನ್ನು ಮುಕ್ತಿಗೊಳಿಸಲಾಗುತ್ತಿದೆ. ಅರ್ಜಿ ಸಲ್ಲಿಸಿದ ಕನಿಷ್ಠ 7 ದಿನಗಳ ಒಳಗೆ ಭೂ ಪರಿವರ್ತನೆ ಮಾಡುವ ನಿಟ್ಟಿನಲ್ಲಿ ಅಧಿವೇಶನದಲ್ಲಿ ನಿರ್ಧಾರ ತೆಗೆದುಕೊಂಡು ಅನುಷ್ಠಾನಗೊಳಿಸಲಾಗಿದೆ ಎಂದು ತಿಳಿಸಿದರು.
BIGG NEWS : ರಾಜ್ಯದ 4-9 ನೇ ತರಗತಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಜನವರಿಯಲ್ಲಿ `ಕಲಿಕಾ ಹಬ್ಬ’ ಆಚರಣೆ