ಬೆಳಗಾವಿ : ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಸಂಬಂದ ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಮಹಾರಾಷ್ಟ್ರ ಸಿಎಂ ಏಕನಾಥ ಶಿಂಧೆ ಮಂಗಳವಾರ ರಾತ್ರಿ ದೂರವಾಣಿ ಕರೆಯಲ್ಲಿ ಮಾತುಕತೆ ನಡೆಸಿದ್ದು, ಶಾಂತಿ ಕಾಪಾಡುವುದಕ್ಕೆ ಒಪ್ಪಿಗೆ ಸೂಚಿಸಿದ್ದಾರೆ.
ಈ ಕುರಿತು ಟ್ವೀಟರ್ ನಲ್ಲಿ ಮಾಹಿತಿ ನೀಡಿರುವ ಸಿಎಂ ಬಸವರಾಜ ಬೊಮ್ಮಾಯಿ, ಮಹಾರಾಷ್ಟ್ರ ಮುಖ್ಯಮಂತ್ರಿ ಶ್ರೀ ಏಕನಾಥ್ ಶಿಂಧೆ ಅವರು ನನ್ನೊಂದಿಗೆ ದೂರವಾಣಿ ಮೂಲಕ ಚರ್ಚಿಸಿದರು, ಎರಡೂ ರಾಜ್ಯಗಳಲ್ಲಿ ಶಾಂತಿ ಮತ್ತು ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಿಕೊಳ್ಳಬೇಕು ಎಂದು ನಾವಿಬ್ಬರೂ ಒಪ್ಪಿಕೊಂಡಿದ್ದೇವೆ ಎಂದು ತಿಳಿಸಿದ್ದಾರೆ.
Maharashtra Chief Minister Shri Eknath Shinde had telephonic discussion with me, we both agreed that there should be peace and law and order to be maintain in both the states.
1/2— Basavaraj S Bommai (@BSBommai) December 6, 2022
ಎರಡೂ ರಾಜ್ಯಗಳ ಜನರ ನಡುವೆ ಸಾಮರಸ್ಯದ ಸಂಬಂಧವಿರುವುದರಿಂದ, ಕರ್ನಾಟಕದ ಗಡಿಗೆ ಸಂಬಂಧಿಸಿದಂತೆ ನಮ್ಮ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ. ಮತ್ತು ಕಾನೂನು ಹೋರಾಟವನ್ನು ಸರ್ವೋಚ್ಚ ನ್ಯಾಯಾಲಯದಲ್ಲಿ ಮುಂದುವರಿಸಲಾಗುವುದು ಎಂದು ಹೇಳಿದ್ದಾರೆ.
Since there is harmonious relation between the people of both the states, however there is no change in our stand as far as Karnataka border is concerned. And the legal battle will be pursued in Supreme court.
2/2— Basavaraj S Bommai (@BSBommai) December 6, 2022