ಬೆಂಗಳೂರು : ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದದಲ್ಲಿ ಕರ್ನಾಟಕದ ನೆಲ, ಜಲ, ಭಾಷೆ ಹಿತ ಕಾಪಾಡಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಗೃಹ ಸಚಿವ ಅರಗಜ್ಞಾನೇಂದ್ರ ಹೇಳಿದ್ದಾರೆ.
BIGG NEWS: ಮತ್ತೆ ಮುಂದುವರೆದ ಠಾಕ್ರೆ ಬಣದವರ ಪುಂಡಾಟಿಕೆ; ಕರ್ನಾಟಕ ಬಸ್ ಗೆ ಮಸಿ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಾರಾಷ್ಟ್ರ ಮುಖ್ಯಮಂತ್ರಿ ಜೊತೆಗೆ ನಮ್ಮ ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿದ್ದಾರೆ. 2 ರಾಜ್ಯಗಳ ಸಿಎಸ್, ಪೊಲೀಸ್ ಅಧಿಕಾರಿಗಳ ಜೊತೆಗೆ ಸಭೆ ಮಾಡಿದ್ದೇವೆ. ನಾವು ಮಾತಿನಲ್ಲಿ ತೋರಿಸಲ್ಲ. ನಮ್ಮ ನಡವಳಿಕೆಯಲ್ಲಿ ತೋರಿಸ್ತೀವಿ, ಎಲ್ಲ ಕಡೆಯೂ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದ್ದಾರೆ.
BIGG NEWS : ಶಾಸಕ ರೇಣುಕಾಚಾರ್ಯ ವಿರುದ್ಧ ದೂರು ನೀಡಿದ್ದ ಗ್ರಾಮ ಲೆಕ್ಕಿಗ ವರ್ಗಾವಣೆ!
ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದಲ್ಲಿ ಸಾರ್ವಜನಿಕರು ಕಾನೂನನ್ನು ಕೈಗೆತ್ತಿಕೊಳ್ಳಬಾರದು. ಯಾವ ಸಚಿವರು ಎಲ್ಲಿಗೆ ಬೇಕಾದ್ರೂ ಹೋಗಬಹುದು. ಬರಬಹುದು. ಆದರೆ ಈಗಿರುವ ಪರಿಸ್ಥಿತಿಯಲ್ಲಿ ಬರುವುದು ಸರಿಯಲ್ಲ, ಬೆಳಗಾವಿಗೆ ಬಂದು ಪ್ರಚೋದನೆ ಮಾಡುವ ಅವಶ್ಯಕತೆ ಇಲ್ಲ ಎಂದು ತಿಳಿಸಿದ್ದಾರೆ.