ಕಲಬುರಗಿ : ದೀಪಾವಳಿ ಹಬ್ಬದ ಸಂದರ್ಭದಲ್ಲಿ ಸಿಡಿಸುವ ಪಟಾಕಿಗಳಿಂದ ಶಬ್ದ ಮಾಲಿನ್ಯ ಹಾಗೂ ವಾಯು ಮಾಲಿನ್ಯದಿಂದಾಗಿ ಪರಿಸರಕ್ಕೆ ಹಾಗೂ ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಲಿದ್ದು, ಆದ್ದರಿಂದ ಜಿಲ್ಲೆಯ ಸಾರ್ವಜನಿಕರು 2022ನೇ ಸಾಲಿನಲ್ಲಿ ಕೇವಲ ಹಸಿರು ಪಟಾಕಿಗಳನ್ನು ಸಿಡಿಸುವ ಮೂಲಕ, ದೀಪಗಳನ್ನು ಬೆಳಗುವ ಮೂಲಕ ಪರಿಸರ ಸ್ನೇಹಿ ದೀಪಾವಳಿ ಹಬ್ಬವನ್ನು ಆಚರಿಸಬೇಕೆಂದು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಕಲಬುರಗಿ ಪ್ರಾದೇಶಿಕ ಕಚೇರಿಯ ಪರಿಸರ ಅಧಿಕಾರಿಗಳು ತಿಳಿಸಿದ್ದಾರೆ.
BIGG NEWS: ಆಂಧ್ರಪ್ರದೇಶದ ಪ್ರಕಾಸಂ ಜಿಲ್ಲೆಯಲ್ಲಿ ನಂದಿ ವಿಗ್ರಹ ಭಗ್ನ!| Nandi idol vandalised
ದೀಪಾವಳಿ ಹಬ್ಬದ ಸಂದರ್ಭದಲ್ಲಿ 125 ಡೆಸಿಬಲ್ಕ್ಕಿಂತ ಹೆಚ್ಚಿನ ಶಬ್ದ ಉಂಟು ಮಾಡುವ ಪಟಾಕಿಗಳನ್ನು ನಿಷೇಧಿಸಲಾಗಿದೆ. ಸರ್ವೋಚ್ಛ ನ್ಯಾಯಾಲಯದ ಆದೇಶದಂತೆ ರಾತ್ರಿ 10 ಗಂಟೆಯಿಂದ ಬೆಳಗಿನ 6 ಗಂಟೆಯವರೆಗೆ ಪಟಾಕಿಗಳ ಸಿಡಿತವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಹಸಿರು ಪಟಾಕಿಗಳನ್ನು ಹೊರತುಪಡಿಸಿ ಉಳಿದ ಯಾವುದೇ ಮಾದರಿಯ ಇತರ ಪಟಾಕಿಗಳ ಮಾರಾಟ ಹಾಗೂ ಬಳಕೆಯನ್ನು ನಿಷೇಧಿಸಲಾಗಿದೆ. ಆಸ್ಪತ್ರೆಗಳ ಹಾಗೂ ವೃದ್ದಾಶ್ರಮಗಳ ಹತ್ತಿರದಲ್ಲಿ ಪಟಾಕಿಗಳ ಸಿಡಿತವನ್ನು ನಿರ್ಭಂಧಿಸಲಾಗಿದೆ.
ಪಟಾಕಿ ಹಚ್ಚುವುದರಿಂದ ಹೊಗೆ, ರಾಸಾಯನಿಕ ಮತ್ತು ವಿಷಕಾರಿ ಸೂಕ್ಷ್ಮ ಕಣಗಳು ಗಾಳಿಯಲ್ಲಿ ಪಸರಿಸಿ ಉಸಿರಾಟದ ಕಾಯಿಲೆಗಳು ಹೆಚ್ಚಿಸುತ್ತವೆ. ಕಣ್ಣುಗಳು ಹಾಗೂ ಶರೀರದ ಇತರೆ ಅಂಗಗಳಿಗೆ ಹಾನಿಯಾಗುತ್ತದೆ. ಶ್ರವಣ ಸಾಮಥ್ರ್ಯವನ್ನು ಕುಗ್ಗಿಸುತ್ತದೆ. ನಿದ್ರಾಹೀನತೆ, ಅಧಿಕ ರಕ್ತದೊತ್ತಡ, ಉದ್ವೇಗ, ಒತ್ತಡಗಳು ಉಂಟಾಗಲಿದೆ. ಸಾಕು ಪ್ರಾಣಿಗಳನ್ನೂ ಒಳಗೊಂಡಂತೆ ಪ್ರಾಣಿಗಳಿಗೆ ತೊಂದರೆಯಾಗಲಿದೆ ಎಂದು ಅವರು ತಿಳಿಸಿದ್ದಾರೆ.