ಬೆಂಗಳೂರು: ದಿನಾಂಕ 06-11-2022ರಂದು ನಡೆದಂತ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ -2022ರ ( Karnataka Teacher Eligibility Test-2022 – KAR TET ) ಕೀ ಉತ್ತರವನ್ನು ( Key Answer ) ಸಾರ್ವಜನಿಕ ಶಿಕ್ಷಣ ಇಲಾಖೆಯು ( School Education Department ) ಪ್ರಕಟಿಸಿದೆ.
ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದ್ದು, ದಿನಾಂಕ 06-11-2022ರಂದು ನಡೆ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ-2022ರ ಪತ್ರಿಕೆ-1 ಮತ್ತು ಪತ್ರಿಕೆ-2ರ ಕೀ ಉತ್ತರಗಳನ್ನು ಇಂದು ಪ್ರಕಟಿಸಲಾಗಿದೆ ಎಂದು ತಿಳಿಸಿದೆ.
ಟಿಇಟಿ ಪರೀಕ್ಷೆಯ ಸರಿ ಉತ್ತರಗಳನ್ನು ಇಲಾಖೆಯ ವೆಬ್ ಸೈಟ್ www.schooleducation.kar.nic.in ಜಾಲತಾಣದಲ್ಲಿ ವೀಕ್ಷಿಸಬಹುದಾಗಿದೆ. ಈ ಸಂಬಂಧದ ಆಕ್ಷೇಪಣೆಗಳನ್ನು ಅಭ್ಯರ್ಥಿಗಳು ದಿನಾಂಕ 10-11-2022 ರಿಂದ 17-11-2022ರ ಒಳಗಾಗಿ ಸಲ್ಲಿಸುವಂತೆ ತಿಳಿಸಿದೆ.
ವರದಿ : ವಸಂತ ಬಿ ಈಶ್ವರಗೆರೆ