ನವದೆಹಲಿ : ಆಹಾರ ಮತ್ತು ನಾಗರಿಕ ಪೂರೈಕೆ ಹಾಗೂ ಅರಣ್ಯ ಖಾತೆ ಸಚಿವ ಉಮೇಶ್ ಕತ್ತಿ ಅವರು ಮಂಗಳವಾರ ರಾತ್ರಿ ತೀವ್ರ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.
ಸಚಿವ ಉಮೇಶ್ ಕತ್ತಿಯವರ ತಂದೆ ವಿಶ್ವನಾಥ್ ಕತ್ತಿ ಅವರು ಕೂಡ ಹೃದಯಾಘಾತದಿಂದಲೇ ಸಾವನ್ನಪ್ಪಿದ್ದರು. ವಿಶ್ವನಾಥ್ ಕತ್ತಿಯವರು ವಿಧಾನಸಭೆ ಅಧಿವೇಶನ ನಡೆಯುವಾಗಲೇ ಹೃದಯಾಘಾತದಿಂದ ನಿಧನರಾಗಿದ್ದರು. ತಂದೆಯ ಮರಣದ ಬಳಿಕ ರಾಜಕೀಯ ಪ್ರವೇಶಿಸಿದ್ದ ಉಮೇಶ್ ಕತ್ತಿ, ತಂದೆಯಂತೆಯೇ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.
BIGG BREAKING NEWS : ಬೆಳ್ಳಂಬೆಳಗ್ಗೆ ಬೆಂಗಳೂರಿನ ಮಣಿಪಾಲ್ ಸಂಸ್ಥೆಗಳ ಮೇಲೆ `IT’ ದಾಳಿ
ಬೆಂಗಳೂರಿನಲ್ಲಿ ರಾತ್ರಿ ಭೋಜನ ಸ್ವೀಕರಿಸಿದ ಬಳಿಕ ಶೌಚಾಲಯಕ್ಕೆ ತೆರಳಿದ ವೇಳೆ ಹೃದಯಾಘಾತ ಸಂಭವಿಸಿದೆ. ಅಲ್ಲೇ ಕುಸಿದು ಬಿದ್ದಿದ್ದ ಅವರನ್ನು ಸಮೀಪದ ಎಸ್.ಎಂ. ರಾಮಯ್ಯ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ನೀಡಿದರೂ ಚಿಕಿತ್ಸೆ ಫಲಿಕಾರಿಯಾಗದೇ ಸಾವನ್ನಪ್ಪಿದ್ದಾರೆ. ಅವರು ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.
ಇನ್ನು ಉಮೇಶ್ ಕತ್ತಿ ಅವರಿಗೆ ಈ ಹಿಂದೆ ಕೂಡ 2 ಬಾರಿ ಹೃದಯಾಘಾತವಾಗಿತ್ತು. ವೈದ್ಯರು ಚಿಕಿತ್ಸೆ ನೀಡಿ, ಸ್ಟೆಂಟ್ ಅಳವಡಿಸಿದ್ದರು. ಆದರೆ ಉಮೇಶ್ ಕತ್ತಿ ಅವರು ನಿರ್ಲಕ್ಷಿಸಿದರಾ ಎಂಬ ಪ್ರಶ್ನೆ ಮೂಡಿದೆ.
BIGG NEWS : ಕಾರಿನ ಹಿಂಬದಿ ಸವಾರರಿಗೂ ಸೀಟ್ ಬೆಲ್ಟ್ ಕಡ್ಡಾಯ : ತಪ್ಪಿದರೆ ದಂಡ ಫಿಕ್ಸ್! Seat belt