ಬೆಳಗಾವಿ : ಕೆಪಿಟಿಸಿಎಲ್ ಕಿರಿಯ ಸಹಾಯಕರ ನೇಮಕಾತಿಗೆ ನಡೆಸಿದ ಪರೀಕ್ಷೆಯಲ್ಲಿ ಅಕ್ರಮ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ಜಿಲ್ಲಾ ಪೊಲೀಸರು ಮತ್ತೆ ನಾಲ್ವರನ್ನು ಬಂಧಿಸಿದ್ದು, ಬಂಧಿತರ ಸಂಖ್ಯೆ 33ಕ್ಕೆ ಏರಿಕೆಯಾಗಿದೆ.
ಬೆಳ್ಳಂಬೆಳಗ್ಗೆ ಆಂಧ್ರದ ಕಾಕಿನಾಡದಲ್ಲಿ ಭೀಕರ ರಸ್ತೆ ಅಪಘಾತ: ನಾಲ್ವರ ದುರ್ಮರಣ, ಹಲವರಿಗೆ ಗಾಯ
ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಅರಬಾಂವಿ ಗ್ರಾಮದ ಮಂಜುನಾಥ ರಾಮಪ್ಪ ಮಾಳ (23), ಪುಂಡಲೀಕ ಫಕ್ಕೀರಪ್ಪ ಬನಾಜ (26), ಮಾರು ರಾಮಣ್ಣ ಹೊಲದವರ (27) ಹಾಗೂ ಕಲ್ಲೋಳ್ಳಿ ಗ್ರಾಮದ ಮಹಾದೇವಾ ಹಣಮಂತ ದಾಸನಾಳ (26) ಬಂಧಿತರು.
2022 ಅ.7 ರಂದು ನಡೆದ ಕೆಪಿಟಿಸಿಎಲ್ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆಗೆ ಮಂಜುನಾಥ ಮಾಳಿ ಹಾಗೂ ಇತರೆ ಮೂವರು ಆರೋಪಿಗಳು ಇಲೆಕ್ಟ್ರಾನಿಕ್ ಡಿವೈಸ್ ಗಳನ್ನು ಮಾಡಲು ಹಣ ನೀಡಿದ್ದರು ಎನ್ನುವ ಆರೋಪ ಕೇಳಿ ಬಂದಿತ್ತು. ಪ್ರಕರಣ ಸಂಬಂಧ ಈಗಾಗಲೇ ಪೊಲೀಸರು 33 ಮಂದಿಯನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ.