ಬೆಳಗಾವಿ : ಕೆಪಿಟಿಸಿಎಲ್ ಕಿರಿಯ ಸಹಾಯಕರ ನೇಮಕಾತಿಗೆ ನಡೆಸಿದ ಪರೀಕ್ಷೆಯಲ್ಲಿ ಅಕ್ರಮ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಗೋಕಾಕ್ ಪೊಲೀಸರು ಶುಕ್ರವಾರ ಮತ್ತೆ ಇಬ್ಬರನ್ನು ಬಂಧಿಸಿದ್ದು, ಬಂಧಿತರ ಸಂಖ್ಯೆ 23ಕ್ಕೆ ಏರಿಕೆಯಾಗಿದೆ.
ಕೆಪಿಟಿಸಿಎಲ್ ಅಕ್ರಮ ನೇಮಕಾತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಲೋಳಸೂರ ಗ್ರಾಮದ ಎಲ್ಲಪ್ಪ ಮಹದೇವಪ್ಪ ರಕ್ಷಿ ಹಾಗೂ ಚಿಕ್ಕೋಡಿ ತಾಲೂಕಿನ ಜಾಗನೂರು ಗ್ರಾಮದ ನಾಗಪ್ಪ ದೊಡ್ಡಮನಿ ಬಂಧಿತ ಆರೋಪಿಗಳು. ಬಂಧಿತರನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಲಾಗಿದೆ.