ನವದೆಹಲಿ . ಮಣಿಪುರದ ನೋನಿ ಜಿಲ್ಲೆಯಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಈವರೆಗೆ ಸಾವನ್ನಪ್ಪಿದವರ ಸಂಖ್ಯೆ 20 ಕ್ಕೆ ಏರಿಕೆಯಾಗಿದೆ. ನಾಪತ್ತೆಯಾಗಿರುವವರ ಪತ್ತೆಗಾಗಿ ಶೋಧ ಕಾರ್ಯ ಮುಂದುವರೆದಿದೆ.
ಮಣಿಪುರದ ನೋನಿ ಜಿಲ್ಲೆಯಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಟೆರಿಟೋರಿಯಲ್ ಆರ್ಮಿಯ ಏಳು ಸಿಬ್ಬಂದಿ ಸೇರಿದಂತೆ 14 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಇದೀಗ ಮೃತರ ಸಂಖ್ಯೆ 20 ಕ್ಕೆ ಏರಿದೆ. 40 ಜನರು ಕಾಣೆಯಾಗಿದ್ದು, ಈವರೆಗೆ 13 ಟೆರಿಟೋರಿಯಲ್ ಆರ್ಮಿ ಸಿಬ್ಬಂದಿ ಮತ್ತು 5 ಸ್ಥಳೀಯ ನಾಗರಿಕರನ್ನು ಸುರಕ್ಷಿತವಾಗಿ ರಕ್ಷಿಸಲಾಗಿದ್ದು, 15 ಟೆರಿಟೋರಿಯಲ್ ಆರ್ಮಿ ಸಿಬ್ಬಂದಿ ಮತ್ತು 5 ಜನರ ದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ.
BIGG NEWS : ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 46 ಡಿವೈಎಸ್ಪಿ ವರ್ಗಾವಣೆಗೊಳಿಸಿ ಆದೇಶ
ಮಣಿಪುರದ ನೋನಿಯಲ್ಲಿರುವ ತುಪುಲ್ ಯಾರ್ಡ್ ರೈಲ್ವೆ ಕನ್ಸ್ಟ್ರಕ್ಷನ್ ಕ್ಯಾಂಪ್ ಬಳಿ ಬುಧವಾರ ರಾತ್ರಿ ಈ ಘಟನೆ ನಡೆದಿದೆ. ಪ್ರತಿಕೂಲ ಹವಾಮಾನದಿಂದಾಗಿ, ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಳು ಸಹ ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿವೆ. 43 ಪ್ರಾದೇಶಿಕ ಸೇನಾ ಸಿಬ್ಬಂದಿ ಸೇರಿದಂತೆ ಸುಮಾರು 72 ಜನರು ಅವಶೇಷಗಳಡಿ ಸಿಲುಕಿದ್ದಾರೆ ಎಂದು ಶಂಕಿಸಲಾಗಿದೆ. 40 ಕ್ಕೂ ಹೆಚ್ಚು ಜನರು ಇನ್ನೂ ಕಾಣೆಯಾಗಿದ್ದಾರೆ. ಭೂಕುಸಿತದಲ್ಲಿ ಗಾಯಗೊಂಡವರಿಗೆ ನೋನಿ ಸೇನಾ ವೈದ್ಯಕೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
BREAKING NEWS : ಬೆಳ್ಳಂಬೆಳಗ್ಗೆ ದಕ್ಷಿಣ ಇರಾನ್ ನಲ್ಲಿ ಪ್ರಬಲ ಭೂಕಂಪ : ರಿಕ್ಟರ್ ಮಾಪಕದಲ್ಲಿ 6.0 ತೀವ್ರತೆ ದಾಖಲು