ಮೈಸೂರು : ಮೈಸೂರಿನಲ್ಲಿ ಮತ್ತೆ ಚಿರತೆ ದಾಳಿ ಮುಂದುವರೆದಿದ್ದು, ರಾಮಕೃಷ್ಣ ನಗರದಲ್ಲಿ ಕೊಟ್ಟಿಗೆಯಲ್ಲಿದ್ದ ಕರುವಿನ ಮೇಲೆ ಚಿರತೆ ದಾಳಿ ಮಾಡಿರುವ ಘಟನೆ ನಡೆದಿದೆ.
ರಾಮಕೃಷ್ಣ ನಗರದಲ್ಲಿ ಕೊಟ್ಟಿಗೆಯಲ್ಲಿದ್ದ ಕರುವಿನ ಮೇಲೆ ಚಿರತೆ ದಾಳಿ ಮಾಡಿದ್ದು, ಕರುವಿನ ದೇಹವನ್ನು ಅರ್ಧ ತಿಂದು ಬಿಟ್ಟುಹೋಗಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕರುವಿನ ಮೇಲೆ ಚಿರತೆ ದಾಳಿಯಿಂದ ಜನರು ಆತಂಕದಲ್ಲಿದ್ದಾರೆ. ಕೆಲ ದಿನಗಳ ಹಿಂದೆ ಮೈಸೂರಿನ ಜೆ.ಸಿ. ಬಡಾವಣೆಯಲ್ಲಿ ಚಿರತೆ ಕಾಣಿಸಿಕೊಂಡಿತ್ತು. ಇದೀಗ ಮತ್ತೆ ಚಿರತೆ ಕಾಣಿಸಿಕೊಂಡಿರುವುದು ಆತಂಕಕ್ಕೆ ಕಾರಣವಾಗಿದೆ.
Mann Ki Baat : ಇಂದು 2023 ರ ಮೊದಲ ‘ಮನ್ ಕಿ ಬಾತ್’ ಪ್ರಸಾರ, ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ