ಬೆಂಗಳೂರು : ಕಾಂಗ್ರೆಸ್ ನವರು ಲಿಂಗಾಯತ ಸಿಎಂ ಅವರನ್ನು ಟಾರ್ಗೆಟ್ ಮಾಡುತ್ತಾರೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಗಂಭೀರ ಆರೋಪ ಮಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರು ಪ್ರತಿಭಾರಿ ಲಿಂಗಾಯತ ಸಮಾಜದ ಸಿಎಂ ಟಾರ್ಗೆಟ್ ಮಾಡ್ತಾರೆ. ಪ್ರಬಲ ಸಮುದಾಯದ ವಿರುದ್ಧ ಹೋರಾಟ ನಡೆಸುತ್ತಾರೆ. ವೀರೆಂದ್ರ ಪಾಟೀಲ್, ಕೆಂಗೆಲ್ ಹನುಮಂತಯ್ಯ ಅವರನ್ನೂ ಬಿಟ್ಟಿಲ್ಲ. ಯಾವ ಯಾವ ನಾಯಕರು ಉತ್ತಮ ನಡೆಸುತ್ತಾ ಬಂದಿದ್ದಾರೆ. ಆ ನಾಯಕರನ್ನೆಲ್ಲ ಕಾಂಗ್ರೆಸ್ ಟಾರ್ಗೆಟ್ ಮಾಡುತ್ತೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವೈಯಕ್ತಿಕ ಲಾಭಕ್ಕಾಗಿ ಕಾಂಗ್ರೆಸ್ ನವರು ಪೇ ಸಿಎಂ ಕ್ಯಾಂಪೇನ್ ಮಾಡುತ್ತಿದ್ದಾರೆ. ಕಾಂಗ್ರೆಸ್ ನವರು ಕೆಳಮಟ್ಟದ ರಾಜಕಾರಣ ಮಾಡುತ್ತಿದ್ದಾರೆ. ಕಾಂಗ್ರೆಸ್ ನವರು ಏನು ಸತ್ಯ ಹರಿಶ್ಚಂದ್ರರಾ? ಕಾಂಗ್ರೆಸ್ ನ ಎಷ್ಟು ಜನ ಜೈಲಿಗೆ ಹೋಗಿದ್ದಾರೆ? ಕಾಂಗ್ರೆಸ್ ನ ಎಷ್ಟು ಜನ ಬೇಲ್ ಮೇಲೆ ಇದ್ದಾರೆ?