ನವದೆಹಲಿ: ಲೋಕಸಭಾ ಚುನಾವಣೆ 2024ರ ದಿನಾಂಕವನ್ನು ಚುನಾವಣಾ ಆಯೋಗ ಶೀಘ್ರದಲ್ಲೇ ಪ್ರಕಟಿಸುವ ಸಾಧ್ಯತೆ ಇದೆ. ಇತ್ತೀಚಿನ ವರದಿಗಳ ಪ್ರಕಾರ, ಚುನಾವಣಾ ಆಯೋಗವು ಇಂದು ಇಲ್ಲವೇ ನಾಳೇ ಸಾರ್ವತ್ರಿಕ ಚುನಾವಣೆಯ ದಿನಾಂಕಗಳನ್ನು ಘೋಷಿಸುವ ಸಾಧ್ಯತೆಯಿದೆ.
ಎನ್ಡಿಟಿವಿ ವರದಿಯ ಪ್ರಕಾರ, ಸೋಮವಾರ ಚುನಾವಣಾ ಆಯೋಗದ ವೀಕ್ಷಕರ ಸಭೆಯಲ್ಲಿ ಸಭೆಯಲ್ಲಿ ಮಾದರಿ ನೀತಿ ಸಂಹಿತೆ ಅನುಷ್ಠಾನದ ಕಾರ್ಯತಂತ್ರದ ಬಗ್ಗೆ ಚರ್ಚಿಸಲಾಯಿತು. ಹಿಂದಿನ ವರದಿಗಳ ಪ್ರಕಾರ, ಮಾರ್ಚ್ 14 ರೊಳಗೆ ಮಾದರಿ ನೀತಿ ಸಂಹಿತೆ ಜಾರಿಗೆ ಬರುವ ನಿರೀಕ್ಷೆಯಿದೆ. ಈ ವಾರ ಗುರುವಾರ ಅಥವಾ ಶುಕ್ರವಾರದ ವೇಳೆಗೆ ಇಸಿಐ ಪ್ರಕಟಣೆಯನ್ನು ನಿರೀಕ್ಷಿಸಲಾಗಿದೆ. ಪ್ರಸ್ತುತ, ಸಾರ್ವತ್ರಿಕ ಚುನಾವಣೆಗಳನ್ನು ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ನಡೆಸಲು ನಿರ್ಧರಿಸಲಾಗಿದೆ. 2019 ರ ಚುನಾವಣೆಯಲ್ಲಿ ದೇಶಾದ್ಯಂತ ಏಳು ಹಂತಗಳಲ್ಲಿ ಮತದಾನ ನಡೆದಿತ್ತು. ಇದೇ ಪ್ರಕ್ರಿಯೆಯನ್ನು ಈ ವರ್ಷವೂ ಜಾರಿಗೆ ತರುವ ನಿರೀಕ್ಷೆಯಿದೆ. ಮುಂಬರುವ ಚುನಾವಣೆಗಳ ಸಂಪೂರ್ಣ ವೇಳಾಪಟ್ಟಿ ಮತ್ತು ವಿವರಗಳನ್ನು ಚುನಾವಣಾ ಆಯೋಗ ಶೀಘ್ರದಲ್ಲೇ ಪ್ರಕಟಿಸಲಿದೆ. ಅದೇ ಮಾಹಿತಿಯು ಅಧಿಕೃತ ವೆಬ್ಸೈಟ್ – eci.gov.in ನಲ್ಲಿಯೂ ಲಭ್ಯವಿರುತ್ತದೆ.