ಬೆಳಗಾವಿ : ಮಹಾರಾಷ್ಟ್ರ-ಕರ್ನಾಟಕ ಗಡಿ ವಿವಾದ ಸಂಬಂಧ ಕಳೆದ ವಾರ ಬೆಳಗಾವಿಗೆ ಭೇಟಿ ನೀಡಬೇಕಿದ್ದ ಮಹಾರಾಷ್ಟ್ರ ಸಚಿವ ಚಂದ್ರಕಾಂತ ಪಾಟೀಲ್ ಮುಖಕ್ಕೆ ವ್ಯಕ್ತಿಯೊಬ್ಬ ಮಸಿ ಬಳಿದಿರುವ ಘಟನೆ ನಡೆದಿದೆ.
ಬಾಬಾ ಸಾಹೇಬ್ ಅಂಬೇಡ್ಕರ್ ಮತ್ತು ಮಹಾತ್ಮ ಜ್ಯೋತಿಬಾ ಫುಲೆ ಅವರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಕ್ಕಾಗಿ ಪುಣೆಯ ಪಿಂಪ್ರಿ-ಚಿಂಚ್ವಾಡ್ನಲ್ಲಿ ಶನಿವಾರ ಅಪರಿಚಿತ ವ್ಯಕ್ತಿಯೊಬ್ಬ ಮಹಾರಾಷ್ಟ್ರ ಸಚಿವ ಚಂದ್ರಕಾಂತ್ ಪಾಟೀಲ್ ಅವರ ಮೇಲೆ ಮಸಿ ಎರಚಿದ್ದಾನೆ. ಪಿಂಪ್ರಿ-ಚಿಂಚ್ವಾಡ್ನಲ್ಲಿ ಸಂಜೆ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಬಿಜೆಪಿ ಕಾರ್ಯಕರ್ತರೊಬ್ಬರ ನಿವಾಸದಿಂದ ಹೊರಬಂದಾಗ ಪಾಟೀಲ್ ಅವರ ಮುಖಕ್ಕೆ ಮಸಿ ಬಳಿಯಲಾಗಿತ್ತು.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಚಂದ್ರಕಾಂತ ಪಾಟೀಲ್, ನನ್ನ ಮೇಲೆ ಹಲ್ಲೆ ನಡೆದಿದೆ, ಆದರೆ ನಾನು ಹೆದರುವುದಿಲ್ಲ. ಯಾರಾದರೂ ಪ್ರತಿಭಟಿಸಲು ಬಯಸಿದರೆ ಪ್ರಜಾಸತ್ತಾತ್ಮಕ ರೀತಿಯಲ್ಲಿ ಮಾಡಬಹುದಾಗಿತ್ತು. ಉದ್ಧವ್ ಠಾಕ್ರೆ, ಶರದ್ ಪವಾರ್ ಮತ್ತು ಅಜಿತ್ ಪವಾರ್ ಸೇರಿದಂತೆ ವಿರೋಧ ಪಕ್ಷಗಳ ನಾಯಕರು ತಮಗೂ ಸಂಭವಿಸಬಹುದು ಎಂದು ಯೋಚಿಸುವಂತೆ ನಾನು ಬಿಜೆಪಿ ಕಾರ್ಯಕರ್ತರಿಗೆ ಮನವಿ ಮಾಡುತ್ತೇನೆ ಎಂದು ಘಟನೆಯ ನಂತರ ಪಾಟೀಲ್ ಹೇಳಿದರು.