ಮಂಡ್ಯ : ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಮಂಡ್ಯದಲ್ಲಿ ರೈತರು ಸಿಎಂ ಬಸವರಾಜ ಬೊಮ್ಮಾಯಿ ಅವರ ಪುತ್ಥಳಿಗೆ ರಕ್ತಾಭಿಷೇಕ ಮಾಡಿದ್ದಾರೆ.
BIGG NEWS : ಹಿರಿಯ ಶಾಸಕ ಆರ್. ವಿ. ದೇಶಪಾಂಡೆಗೆ 2022ರ ಅತ್ಯುತ್ತಮ ಶಾಸಕ ಪ್ರಶಸ್ತಿ ಪ್ರದಾನ
ಮಂಡ್ಯದಲ್ಲಿ ರೈತರು ಕಬ್ಬು ಸೇರಿದಂತೆ ವಿವಿಧ ಬೆಳೆಗಳಿಗೆ ವೈಜ್ಞಾನಿಕ ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ಕಳೆದ 50 ದಿನಗಳಿಂದ ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ಆದರೆ ಸರ್ಕಾರ ಈವರೆಗೂ ನಮ್ಮ ಬೇಡಿಕೆ ಈಡೇರಿಸಿಲ್ಲ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದು, ಸರ್ಕಾರದ ನಡೆ ಖಂಡಿಸಿ ಸಿಎಂ ಬೊಮ್ಮಾಯಿ ಪ್ರತಿಮೆಗೆ ರಕ್ತಾಭಿಷೇಕ ಮಾಡಿದ್ದಾರೆ.
ಇಂದು ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಮುಂಭಾಗ ಪ್ರತಿಭಟನೆ ನಡೆಸಿದ ರೈತರು ತಮ್ಮ ದೇಹಗಳಿಂದ ರಕ್ತ ತೆಗೆದು ಸಿಎಂ ಪ್ರತಿಮೆ ಇಟ್ಟು ರಕ್ತಾಭಿಷೇಕ ಮಾಡಿದ್ದಾರೆ.