ಮಂಡ್ಯ : ಮಂಡ್ಯದಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನಿಡಿ ಸಿಕ್ಕಿಬಿದ್ದಿದ್ದ ಶಿಕ್ಷಕನನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು ಅಮಾನತು ಮಾಡಿದ್ದಾರೆ.
ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಕಟ್ಟೇರಿ ಗ್ರಾಮದ ಆರ್ ಎಂಎಸ್ ವಿ ಸರ್ಕಾರಿ ಪ್ರೌಢಶಾಲೆಯ ಬಾಲಕಿಯರ ಹಾಸ್ಟೆಲ್ ನಲ್ಲಿ ಮುಖ್ಯ ಶಿಕ್ಷಕ ಹಾಗೂ ಹಾಸ್ಟೆಲ್ ಮೇಲ್ವಿಚಾರಕ ಚಿನ್ಮಯಾನಂದ ಮೂರ್ತಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದ ಘಟನೆ ರಾಜ್ಯಾದ್ಯಂತ ಭಾರೀ ಸದ್ದು ಮಾಡಿತ್ತು. ಇದೀಗ ಸಾರ್ವನಿಕ ಶಿಕ್ಷಣ ಇಲಾಖೆ ಆಯುಕ್ತ ಡಾ.ಆರ್. ವಿಶಾಲ್ ಅವರು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.
ಕಾಮುಕ ಶಿಕ್ಷಣ ಚಿನ್ಮಯಾನಂದ ಮೂರ್ತಿ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿಯರಿಗೆ ಹಲವು ತಿಂಗಳಿಂದ ಲೈಂಗಿಕ ಕಿರುಕುಳ ಕೊಡುತ್ತಿದ್ದನ್ನು.ತರಗತಿ ಮುಗಿದ ಬಳಿಕ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿಯರನ್ನು ಕೊಠಡಿಗೆ ಕರೆಸಿಕೊಂಡು ವಿದ್ಯಾರ್ಥಿನಿಯರಿಗೆ ಲೈಂಗಿಕವಾಗಿ ಕಿರುಕುಳ ನೀಡುತ್ತಿದ್ದನ್ನು ಎಂದು ವಿದ್ಯಾರ್ಥಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದರು.
BREAKING NEWS :ಅತ್ಯಾಚಾರ ಅಪರಾಧಿಗಳ ಬಿಡುಗಡೆ ಪ್ರಶ್ನಿಸಿ ಬಿಲ್ಕಿಸ್ ಬಾನೊ ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿ ವಜಾ