ಮಂಗಳೂರು : ಮಂಗಳೂರಿನಲ್ಲಿ ಆಟೋದಲ್ಲಿ ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ಎನ್ ಐಎ ಅಧಿಕಾರಿಗಳಿಗೆ ಉಗ್ರ ಶಾರಿಕ್ ಕುರಿತ ಮತ್ತೊಂದು ಸ್ಪೋಟಕ ಮಾಹಿತಿ ಬಹಿರಂಗಗೊಂಡಿದೆ.
ವೈರಲ್ ಆಗ್ತಿದೆ ಸೂಪರ್ ಮ್ಯಾನ್ ಅಪ್ಪನ ಕಾಳಜಿ… ಹೃದಯಸ್ಪರ್ಶಿ ವಿಡಿಯೋ ಇಲ್ಲಿದೆ ನೋಡಿ! | WATCH VIDEO
ಉಗ್ರ ಶಾರೀಕ್ನ ತನಿಖೆ ಮುಂದುವರಿಸಿದ ಎನ್ಐಎ ಅಧಿಕಾರಿಗಳಿಗೆ ಸ್ಫೋಟಕ ಮಾಹಿತಿಗಳು ಸಿಗುತ್ತಿದ್ದು, ಇದೀಗ ಶಾರಿಕ್ ಹಣದ ಮೂಲ ಜಾಲಾಡಿದ ಅಧಿಕಾರಿಗಳಿಗೆ ಶಾಕ್ ಆಗಿದ್ದು, ಹೆಚ್ಚಿನ ಹಣ ಡಾಲರ್ ಮೂಲಕ ಶಾರಿಕ್ ಅಕೌಂಟ್ಗೆ ಬರುತ್ತಿದ್ದ ದಾಖಲೆ ಸಿಕ್ಕಿದೆ.
ಶಾರಿಕ್ ಉಗ್ರ ಕೃತ್ಯಕ್ಕೆ ವಿದೇಶದಿಂದ ಸಹಕಾರ ಮಾಡುತ್ತಿದ್ದವರು ಡಾಲರ್ ಮೂಲಕ ಆರ್ಥಿಕ ಸಹಾಯ ನೀಡುತ್ತಿರುವ ಬಗ್ಗೆ ಎನ್ಐಎ ಅಧಿಕಾರಿಗಳಿಗೆ ದಾಖಲೆಗಳು ಸಿಕ್ಕಿವೆ. ಡಾರ್ಕ್ ವೆಬ್ನಲ್ಲಿರುವ ಅಕೌಂಟ್ಗೆ ಡಾಲರ್ ನಲ್ಲಿ ಹಣ ಬಂದಿರೋ ದಾಖಲೆ ಲಭ್ಯವಾಗಿದ್ದು, ಎನ್ ಐಎ ಅಧಿಕಾರಿಗಳು ತನಿಖೆ ಮುಂದುವರೆಸಿದ್ದಾರೆ.
BIGG NEWS: ಅಮೆಜಾನ್ನಿಂದ ಮತ್ತೆ 20,000 ಉದ್ಯೋಗಿಗಳ ವಜಾ | Amazon layoff