ಮಂಗಳೂರು : ಮಂಗಳೂರಿನಲ್ಲಿ ಆಟೋದಲ್ಲಿ ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ಎನ್ ಐಎ ಅಧಿಕಾರಿಗಳಿಗೆ ಉಗ್ರ ಶಾರಿಕ್ ಕುರಿತ ಮತ್ತೊಂದು ಸ್ಪೋಟಕ ಮಾಹಿತಿ ಬಹಿರಂಗಗೊಂಡಿದೆ.
ಉಗ್ರ ಶಾರೀಕ್ನ ತನಿಖೆ ಮುಂದುವರಿಸಿದ ಎನ್ಐಎ ಅಧಿಕಾರಿಗಳಿಗೆ ಸ್ಫೋಟಕ ಮಾಹಿತಿಗಳು ಸಿಗುತ್ತಿದ್ದು, ಇದೀಗ ಶಾರಿಕ್ ಹಣದ ಮೂಲ ಜಾಲಾಡಿದ ಅಧಿಕಾರಿಗಳಿಗೆ ಶಾಕ್ ಆಗಿದ್ದು, ಹೆಚ್ಚಿನ ಹಣ ಡಾಲರ್ ಮೂಲಕ ಶಾರಿಕ್ ಅಕೌಂಟ್ಗೆ ಬರುತ್ತಿದ್ದ ದಾಖಲೆ ಸಿಕ್ಕಿದೆ. ಉಗ್ರ ಶಾರಿಕ್ ಹಣದ ಮೂಲ ಜಾಲಾಡಿದ ಅಧಿಕಾರಿಗಳಿಗೆ ಶಾಕ್ ಆಗಿದ್ದು, ಹೆಚ್ಚಿನ ಹಣ ಡಾಲರ್ ಮೂಲಕ ಅಕೌಂಟ್ಗೆ ಬರುತ್ತಿದ್ದ ದಾಖಲೆ ಸಿಕ್ಕಿದೆ. ಮೈಸೂರಿನ ನೂರಾರು ಮಂದಿಯ ಅಕೌಂಟ್ಗೆ ಡಾಲರ್ ಭಾರತೀಯ ಕರೆನ್ಸಿಯಾಗಿ ವರ್ಗಾವಣೆ ಆಗಿದ್ದು 40ಕ್ಕೂ ಅಧಿಕ ಜನರನ್ನು ವಿಚಾರಣೆ ನಡೆಸಲಾಗಿದೆ.
ಶಾರಿಕ್ ಉಗ್ರ ಕೃತ್ಯಕ್ಕೆ ವಿದೇಶದಿಂದ ಸಹಕಾರ ಮಾಡುತ್ತಿದ್ದವರು ಡಾಲರ್ ಮೂಲಕ ಆರ್ಥಿಕ ಸಹಾಯ ನೀಡುತ್ತಿರುವ ಬಗ್ಗೆ ಎನ್ಐಎ ಅಧಿಕಾರಿಗಳಿಗೆ ದಾಖಲೆಗಳು ಸಿಕ್ಕಿವೆ. ಡಾರ್ಕ್ ವೆಬ್ನಲ್ಲಿರುವ ಅಕೌಂಟ್ಗೆ ಡಾಲರ್ ನಲ್ಲಿ ಹಣ ಬಂದಿರೋ ದಾಖಲೆ ಲಭ್ಯವಾಗಿದ್ದು, ಎನ್ ಐಎ ಅಧಿಕಾರಿಗಳು ತನಿಖೆ ಮುಂದುವರೆಸಿದ್ದಾರೆ.