ಮಂಗಳೂರು: ಮಂಗಳೂರು ಅಭಿವೃದ್ದಿ ಪ್ರಾಧಿಕಾರದ ಆಯುಕ್ತ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ನಡೆದಿದೆ. ಮನ್ಸೂರ್ ಅಲಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಅಧಿಕಾರಿಯಾಗಿದ್ದಾರೆ.
ವ್ಯಕ್ತಿಯೊಬ್ಬರಿಂದ ಮನ್ಸೂರ್ ಅಲಿ ಟಿಡಿಆರ್ ಕ್ಲಿಯರ್ ಮಾಡುವ ಸಲವಾಗಿ ಬರೋಬ್ಬರಿ 25 ಲಕ್ಷ ಲಂಚ ಪಡೆಯುತ್ತಿದ್ದ ಸಮಯದಲ್ಲಿ ಡಿವೈಎಸ್‌ಪಿ ಚೆಲುವ ರಾಜ್ ಅವರ ನೇತೃತ್ವದಲ್ಲಿ ನಡೆದ ಕಾರ್ಯಚರಣೆ ನಡೆಸಿದ್ದಾರೆ ಎನ್ನಲಾಗಿದೆ. ಇನ್ನೂ ಇದೇ ವೇಳೇ ಲೋಕಾಯುಕ್ತ ಅಧಿಕಾರಿಗಳು ಮಧ್ಯವರ್ತಿಯೊಬ್ಬರನ್ನು ಕೂಡ ಬಂಧಿಸಿದ್ದಾರೆ ಎನ್ನಲಾಗಿದೆ.