ಬೆಳಗಾವಿ: ಇಂದಿನಿಂದ ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ಆರಂಭಗೊಳ್ಳಲಿದೆ. ಇದೇ ವೇಳೆಯಲ್ಲಿ ಎಂಇಎಸ್ ನಿಂದ ಬೆಳಗಾವಿಯಲ್ಲಿ ಮಹಾಮೇಳಾವ್ ಆಯೋಜಿಸಲಾಗಿದೆ. ಇದಕ್ಕೆ ಮಹಾ ಸಂಸದ ಧೈರ್ಯಶೀಲ್ ಮಾನೆ ಕೂಡ ಭಾಗಿಯಾಗಲಿದ್ದಾರೆ ಎನ್ನಲಾಗಿತ್ತು. ಹೀಗಾಗಿ ಜಿಲ್ಲಾಧಿಕಾರಿಗಳು ಮಹಾ ಸಂಸದರು ಬೆಳಗಾವಿ ಪ್ರವೇಶಕ್ಕೆ ನಿಷೇಧ ಹೇರಿ ಆದೇಶಿಸಿದ್ದಾರೆ.
ಬೆಳಗಾವಿಯ ಚಳಿಗಾಲದ ಅಧಿವೇಶನದ ವೇಳೆಯಲ್ಲಿಯೇ, ಬೆಳಗಾವಿಯಲ್ಲಿ ಎಂಇಎಸ್ ನಿಂದ ವ್ಯಾಕ್ಸಿನ್ ಡಿಪೋ ಬಳಿಯಲ್ಲಿ ಮಹಾಮೇಳಾವ್ ಸಮಾವೇಶವನ್ನು ಆಯೋಜಿಸಲಾಗಿದೆ. ಈ ಸಮಾವೇಶಕ್ಕೆ ಮಹಾರಾಷ್ಟ್ರ ಸಂಸದ ಧೈರ್ಯಶೀಲ್ ಮಾನೆ ಕೂಡ ಭಾಗಿಯಾಗಿ, ಭಾಷಣ ಮಾಡಲಿದ್ದಾರೆ ಎನ್ನಲಾಗುತ್ತಿದೆ.
ಒಂದು ವೇಳೆ ಮಹಾರಾಷ್ಟ್ರ ಸಂಸದ ಧೈರ್ಯಶೀಲ್ ಮಾನೆ ಭಾಗಿಯಾಗಿ ಭಾಷಣ ಮಾಡಿದರೇ, ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗೋ ಸಾಧ್ಯತೆ ಇದೆ ಎನ್ನಲಾಗಿದೆ. ಈ ಹಿನ್ನಲೆಯಲ್ಲಿ ಬೆಳಗಾವಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್, ಮಹಾ ಸಂಸದ ಧೈರ್ಯಶೀಲ್ ಮಾನೆ ಬೆಳಗಾವಿ ಪ್ರವೇಶಕ್ಕೆ ನಿರ್ಬಂಧ ಹೇರಿ, ಆದೇಶಿಸಿದ್ದಾರೆ.
BIGG NEWS : ಬೆಳಗಾವಿ ಅಧಿವೇಶನ’ದಲ್ಲಿ ಭಾಗಿಯಾಗುವ ‘ಸರ್ಕಾರಿ ನೌಕರರೇ’ ಗಮನಿಸಿ : ‘ಐಡಿ ಕಾರ್ಡ್’ ಧರಿಸುವುದು ಕಡ್ಡಾಯ