ಬಳ್ಳಾರಿ : ಸಾರಿಗೆ ಸಚಿವ ಬಿ.ಶ್ರೀರಾಮುಲು ಬಿಜೆಪಿಗೆ ರಾಜೀನಾಮೆ ಕೊಟ್ಟು ಕಾಂಗ್ರೆಸ್ ಪಕ್ಷಕ್ಕೆ ಬರಲಿ ಎಂದು ಕಾಂಗ್ರೆಸ್ ಶಾಸಕ ನಾಗೇಂದ್ರ ಆಹ್ವಾನ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾರಿಗೆ ಸಚಿವ ಶ್ರೀರಾಮುಲು ಅವರು ವಾಲ್ಮೀಕಿ ಸಮುದಾಯಕ್ಕೆ ಮೀಸಲಾತಿ ಕೊಡಿಸುತ್ತೇನೆ ಎಂದು ಹೇಳುತ್ತಾ ಬಂದಿದ್ದಾರೆ. ಆದರೆ ಈವರೆಗೂ ಮೀಸಲಾತಿ ಕೊಡಿಸಲಾಗದ ಶ್ರೀರಾಮುಲು ಬಿಜೆಪಿ ಪಕ್ಷ ಬಿಟ್ಟು ಬರಲಿ. ಕಾಂಗ್ರೆಸ್ ತತ್ವ ಸಿದ್ಧಾಂತಗಳನ್ನು ಮೆಚ್ಚಿ ಬಂದರೆ ಕರೆದುಕೊಳ್ಳುತ್ತೇವೆ ಎಂದು ಹೇಳಿದ್ದಾರೆ.
BIGG NEWS : ರಾಜ್ಯದ ಜನತೆಗೆ ಮತ್ತೊಂದು ಗುಡ್ ನ್ಯೂಸ್ : ಅರ್ಹ ಫಲಾನುಭವಿಗಳಿಗೆ ಆರೋಗ್ಯ ಕಾರ್ಡ್ ವಿತರಣೆಗೆ ಸೂಚನೆ
ಮೀಸಲಾತಿ ವಿಚಾರದಲ್ಲಿ ಅತಂತ್ರವಾಗಿರೋ ಶ್ರೀರಾಮುಲು ಕಾಂಗ್ರೆಸ್ ಗೆ ಬರಲಿ. ಸಿದ್ದರಾಮಯ್ಯ ಕಾಂಗ್ರೆಸ್ ತತ್ವ ಸಿದ್ದಾಂತಗಳನ್ನು ಹೇಳುತ್ತಾರೆ ಅದನ್ನು ಒಪ್ಪಿ ಕಾಂಗ್ರೆಸ್ ಪಕ್ಷಕ್ಕೆ ಬರುವುದಾದರೆ ಬರಲಿ, ಮೀಸಲಾತಿ ವಿಚಾರದಲ್ಲಿ ವಾಲ್ಮಿಕಿ ಸಮುದಾಯಕ್ಕೆ ಬಿಜೆಪಿ ಸರ್ಕಾರ ಮೋಸ ಮಾಡಿದೆ ಎಂದು ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.