ಮೈಸೂರು : ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತಂತೆ ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪ ಮಹತ್ವದ ಹೇಳಿಕೆ ನೀಡಿದ್ದು, ಇನ್ನೂ 3 ತಿಂಗಳು ಕಾಲ ಸಚಿವ ಸಂಪುಟ ವಿಸ್ತರಣೆ ನಡೆಯುವುದಿಲ್ಲ ಎಂದು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯಕ್ಕೆ ಪಂಚರಾಜ್ಯ ಚುನಾವಣೆ ನಡೆಯುತ್ತಿದೆ. ಅದು ಮುಗಿಯುವವರೆಗೆ ಕರ್ನಾಟಕದಲ್ಲಿ ಸಂಪುಟದ ವಿಸ್ತರಣೆ ನಡೆಯುವುದಿಲ್ಲ. ಈ ಬಗ್ಗೆ ನನಗೆ ನಮ್ಮ ಹೈಕಮಾಂಡ್ ನಾಯಕರು ಹೇಳಿಲ್ಲ. ಆದರೆ ಖುದ್ದು ಸಿಎಂ ಬೊಮ್ಮಾಯಿ ಸ್ಪಷ್ಟನೆ ನೀಡಿದ್ದಾರೆ ಎಂದರು.
ಸಚಿವ ಸಂಪುಟ ವಿಸ್ತರಣೆ ವಿಚಾರದಲ್ಲಿ ಹೈ ಕಮಾಂಡ್ ತೀರ್ಮಾನಕ್ಕೆ ನಾನು ಬದ್ದ. ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಇದನ್ನು ಹೈ ಕಮಾಂಡ್ ನಾಯಕರು ನಿರ್ಧರಿಸುತ್ತಾರೆ ಎಂದು ಹೇಳಿದ್ದಾರೆ.
BIG BREAKING NEWS: ಭಾರತದಲ್ಲಿ ಮತ್ತಷ್ಟು ಇಳಿದ ಕೊರೋನಾ : ಇಂದು 67597 ಪ್ರಕರಣ, 1188 ಸಾವುಗಳು ವರದಿ