ಧಾರವಾಡ : ಗಣಿತ ಮೇಳದಲ್ಲಿ ಪ್ರಥಮ ಸ್ಥಾನ ಪಡೆಯುವ ವಿದ್ಯಾರ್ಥಿಗೆ 25 ಸಾವಿರ ರೂಪಾಯಿ, ದ್ವಿತೀಯ ಸ್ಥಾನ 15 ಸಾವಿರ ಮತ್ತು ತೃತೀಯ ಸ್ಥಾನ ಪಡೆಯುವ ವಿದ್ಯಾರ್ಥಿಗೆ ವೈಯಕ್ತಿಕವಾಗಿ ಬಹುಮಾನ ನೀಡುತ್ತೇನೆ ಎಂದು ಸಚಿವ ಪ್ರಹ್ಲಾದ್ ಜೋಶಿ ಘೋಷಿಸಿದ್ದಾರೆ.
BIGG NEWS : ಕರ್ನಾಟಕವು `RSS’ ಪ್ರಯೋಗಾಲಯವಾಗಿ ಮಾರ್ಪಟ್ಟಿದೆ : ಕೇರಳ ಸಿಎಂ ಪಿಣರಾಯಿ ವಿಜಯನ್
ಪ್ರಧಾನಿ ನರೇಂದ್ರ ಮೋದಿ ಅವರ 72ನೇ ಜನ್ಮದಿನದ ಅಂಗವಾಗಿ ನಗರದ ಕರ್ಷ ಜ್ಞಾನ ಫೌಂಡೇಶನ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಕೆ.ಇ. ಬೋರ್ಡ್ ಸಂಸ್ಥೆ ಜಂಟಿಯಾಗಿ ಎರಡು ದಿನಗಳ ಮೋಜಿನೊಂದಿಗೆ ಗಣಿತ ಕಲಿಕೆ ಮೇಳಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ವಿದ್ಯಾರ್ಥಿಗಳಲ್ಲಿ ಗಣಿತ ಕಲಿಕೆ ಉತ್ತೇಜಿಸುವ ನಿಟ್ಟಿನಲ್ಲಿ ಆಯೋಜಿಸಿರುವ ಗಣಿತ ಮೇಳದಲ್ಲಿ ಪ್ರಥಮ ಸ್ಥಾನ, ದ್ವಿತೀಯ ಸ್ಥಾನ ಹಾಗೂ ತೃತೀಯ ಸ್ಥಾನ ಪಡೆಯುವ ವಿದ್ಯಾರ್ಥಿಗಳಿಗೆ ಬಹುಮಾನ ನೀಡುವುದಾಗಿ ಹೇಳಿದ್ದಾರೆ.
ಭಾರತೀಯ ವೇದ, ಪುರಾಣಗಳಲ್ಲಿ ಗಣಿತದ ಉಲ್ಲೇಖವಿದ್ದು, ಗಣಿತ ಶಾಸ್ತ್ರಕ್ಕೆ ಮೂರು ಸಾವಿರ ವರ್ಷಗಳ ಇತಿಹಾಸವಿದೆ. ಜಗತ್ತಿಗೆ ಸೊನ್ನೆ ಪರಿಚಯಿಸಿದ ಕೀರ್ತಿ ಭಾರತೀಯರಿಗೆ ಸಲ್ಲುತ್ತದೆ. ಬದಲಾದ ಸಂದರ್ಭದಲ್ಲಿ ಗಣಿತ ಕಬ್ಬಿಣದ ಕಡಲೆ ಎಂದು ವಿದ್ಯಾರ್ಥಿಗಳು ಭಾವಿಸುತ್ತಿದ್ದು, ಆ ಭಯ ತೊಡೆದು ಗಣಿತದಲ್ಲಿ ಆಸಕ್ತಿ ಮೂಡಿಸಲು ಈ ಮೇಳ ಆಯೋಜಿಸಿರುವುದು ಅಭಿನಂದನೀಯ ಕಾರ್ಯ ಎಂದರು.