ಬೆಂಗಳೂರು : ಆಹಾರ ಮತ್ತು ನಾಗರಿಕ ಪೂರೈಕೆ ಹಾಗೂ ಅರಣ್ಯ ಖಾತೆ ಸಚಿವ ಉಮೇಶ್ ಕತ್ತಿ ಅವರು ಮಂಗಳವಾರ ರಾತ್ರಿ ತೀವ್ರ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.
ಸಚಿವ ಉಮೇಶ್ ಕತ್ತಿ ವಿಧಿವಶ ಹಿನ್ನೆಲೆ ನಾಳೆ ಚಿಕ್ಕಬಳ್ಳಾಪುರದಲ್ಲಿ ನಡೆಯಬೇಕಿದ್ದ ಜನೋತ್ಸವ ಸಮಾವೇಶ ಬಹುತೇಕ ರದ್ದಾಗುವ ಸಾಧ್ಯತೆ ಎನ್ನಲಾಗುತ್ತಿದೆ. ಮೂರು ದಿನಗಳ ಕಾಲ ಸರ್ಕಾರದಿಂದ ಸಂತಾಪ ಸೂಚನೆ ಸಾಧ್ಯತೆಯಿದ್ದು, ಶೋಕಾಚರಣೆ ಘೋಷಣೆ ವೇಳೆ ಸಮಾವೇಶ, ಸರ್ಕಾರಿ ಕಾರ್ಯಕ್ರಮ ನಡೆಸುವ ಹಾಗಿಲ್ಲ. ಹೀಗಾಗಿ ಬಹುತೇಕ ಜನೋತ್ಸವ ಸಮಾವೇಶ ರದ್ದಾಗುವ ಸಾಧ್ಯತೆ ಎನ್ನುಲಾಗುತ್ತಿದೆ.
ಸಚಿವ ಉಮೇಶ್ ಕತ್ತಿ ನಿಧನರಾಗಿರುವ ಹಿನ್ನೆಲೆಯಲ್ಲಿ ನಾಳೆ ನಿಗದಿಯಾಗಿರುವ ಸಮಾವೇಶವನ್ನ ಅನಿವಾರ್ಯವಾಗಿ ಮೊಟಕುಗೊಳಿಸಲು ತೀರ್ಮಾನ ಮಾಡಲಾಗುತ್ತಿದೆ ಎನ್ನಲಾಗುತ್ತಿದೆ.