ಬೆಂಗಳೂರು : ಆಹಾರ ಮತ್ತು ನಾಗರಿಕ ಪೂರೈಕೆ ಹಾಗೂ ಅರಣ್ಯ ಖಾತೆ ಸಚಿವ ಉಮೇಶ್ ಕತ್ತಿ ಅವರು ಮಂಗಳವಾರ ರಾತ್ರಿ ತೀವ್ರ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.
BIGG BREAKING NEWS: ಸಚಿವ ಉಮೇಶ್ ಕತ್ತಿ ಇನ್ನಿಲ್ಲ | Minister Umesh Katti No More
ಬೆಂಗಳೂರಿನಲ್ಲಿ ರಾತ್ರಿ ಭೋಜನ ಸ್ವೀಕರಿಸಿದ ಬಳಿಕ ಶೌಚಾಲಯಕ್ಕೆ ತೆರಳಿದ ವೇಳೆ ಹೃದಯಾಘಾತ ಸಂಭವಿಸಿದೆ. ಅಲ್ಲೇ ಕುಸಿದು ಬಿದ್ದಿದ್ದ ಅವರನ್ನು ಸಮೀಪದ ಎಸ್.ಎಂ. ರಾಮಯ್ಯ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ನೀಡಿದರೂ ಚಿಕಿತ್ಸೆ ಫಲಿಕಾರಿಯಾಗದೇ ಸಾವನ್ನಪ್ಪಿದ್ದಾರೆ. ಅವರು ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.
ಉಮೇಶ್ ಕತ್ತಿ ಅಂತ್ಯಕ್ರಿಯೆಯನ್ನು ಹುಟ್ಟೂರಾದ ಬೆಲ್ಲದ ಬಾಗೇವಾಡಿಯಲ್ಲಿ ಇಂದು ನೆರವೇರಿಸಲಾಗುವುದು. ಅದಕ್ಕೂ ಮೊದಲು ಬೆಂಗಳೂರು ನಿವಾಸದ ಬಳಿ ಸಾರ್ವಜನಿಕರಿಗೆ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ಬಳಿಕ ವಿಶೇಷ ವಿಮಾನದಲ್ಲಿ ಹುಟ್ಟೂರಿಗೆ ಕೊಂಡೊಯ್ಯಲಾಗುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.