ಬೆಂಗಳೂರು : ಪಿಎಸ್ ಐ ನೇಮಕಾತಿ ಹಗರಣದಲ್ಲಿ ಶಾಸಕ ಬಸವರಾಜ ದಡೇಸಗೂರು ಅವರು ಆಡಿಯೋ ನನ್ನದೇ ಎಂದು ಒಪ್ಪಿಕೊಂಡಿದ್ದಾರೆ. ಆದರೂ ಅವರ ಮೇಲೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಮಾಜಿ ಸಚಿವ ಶಿವರಾಜ ತಂಗಡಗಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ. ಶಾಸಕ ಬಸವರಾಜ ದಡೇಗಸಗೂರು ಅವರು ಆಡಿಯೋ ನನ್ನದೇ ಎಂದು ಒಪ್ಪಿಕೊಂಡಿದ್ದಾರೆ. ಆಡಿಯೋ ನನ್ನದೇ ಎಂದು ಒಪ್ಪಿಕೊಂಡರೂ ಬಿಜೆಪಿ ಸಾಸಕ ದಡೇಸಗೂರು ವಿರುದ್ಧ ಈವರೆಗೂ ಕೊಪ್ಪಳ ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷರು ಕ್ರಮಕೈಗೊಂಡಿಲ್ಲ ಎಂದಿದ್ದಾರೆ.
ದಡೇಸಗೂರು ವಿಚಾರದ ಬಗ್ಗೆ ಗೃಹ ಸಚಿವರು ಬಾಯಿ ಬಿಡುತ್ತಿಲ್ಲ. ಹಣ ಪಡೆದಿರುವುದು ಬಿಜೆಪಿ ಶಾಸಕರು ಒಪ್ಪಿಕೊಂಡಿದ್ದಾರೆ. ಇಷ್ಟೇಲ್ಲಾ ಆದರೂ ರಾಜ್ಯ ಸರ್ಕಾರ ಯಾವುದೆ ಕ್ರಮ ಕೈಗೊಂಡಿಲ್ಲ ಎಂದು ಹೇಳಿದ್ದಾರೆ.
ಇನ್ನು ನಿವೃತ್ತ ಪೊಲೀಸ್ ಅಧಿಕಾರಿ ಎಂ.ಪರಸಪ್ಪ ಅವರು ಶಾಸಕ ಬಸವರಾಜ ದಡೇಸಗೂರಿಗೆ ಹಣ ಕೊಡಲು ಬಂದಿದ್ದ ಫೋಡೋ ಸಾಕ್ಷ್ಯವನ್ನು ಕಾಂಗ್ರೆಸ್ ನಾಯಕರು ಬಿಡುಗಡೆ ಮಾಡಿದ್ದಾರೆ.