ಚಾಮರಾಜನಗರ : ಅನುದಾನ ಹಂಚಿಕೆಯಲ್ಲಿ ರಾಜ್ಯ ಸರ್ಕಾರ ತಾರತಮ್ಯ ಮಾಡುತ್ತಿದೆ ಎಂದು ಮಾಜಿ ಸಚಿವ, ಶಾಸಕ ಪುಟ್ಟರಂಗಶೆಟ್ಟಿ ರಾಜ್ಯ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರವು ಮಳೆ ನೀರು ನುಗ್ಗಿದ ಮನೆಗಳಿಗೆ 10 ಸಾವಿರ ರೂ. ಪರಿಹಾರ ನೀಡಿದ್ದಾರೆ. ಬೇರೆ ಯಾವುದೇ ಹಾನಿಯಾಗಿದ್ದರೂ ಸರ್ಕಾರ ನಯಾಪೈಸೆ ಪರಿಹಾರ ನೀಡಿಲ್ಲ. ಚಾಮರಾಜನಗರ ಕ್ಷೇತ್ರದಲ್ಲಿ ಮಳೆಗೆ ಕೆರೆ ಕಟ್ಟೆ ಒಡೆದು ಹೋಗಿದೆ. ರಸ್ತೆ, ಸೇತುವೆಗಳು ಹಾಳಾಗಿವೆ. ಎನ್ ಡಿಆರ್ ಎಫ್, ಎಸ್ ಡಿಆರ್ ಎಫ್ ಒಂದು ರೂ. ಸಹ ಬಿಡುಗಡೆ ಮಾಡಿಲ್ಲ ಎಂದು ಹೇಳಿದ್ದಾರೆ.
ಕೊರೊನಾ ಎಂದು ಹೇಳಿಕೊಂಡು 2019 ರಿಂದ ಅನುದಾನ ಕೊಟ್ಟಿಲ್ಲ. ವಿಶೇಷ ಅನುದಾನ ಕೊಡುವುದಾಗಿ ಹೇಳಿದ್ದ ಸರ್ಕಾರ ಇದುವರೆಗೂ ಕೊಟ್ಟಿಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.