ಮೈಸೂರು : ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಲಾಗಿದೆ ಎಂದು ಜೆಡಿಎಸ್ ಶಾಸಕ ಸಾ.ರಾ.ಮಹೇಶ್ ಮಾಹಿತಿ ನೀಡಿದ್ದಾರೆ.
BIGG NEWS : ಅರಣ್ಯಪ್ರದೇಶಗಳ ವ್ಯಾಪ್ತಿಯಲ್ಲಿ ಕಾಡಾನೆ ಹಾವಳಿ ತಡೆಯಲು ಕ್ರಮ : ಸಿಎಂ ಬಸವರಾಜ ಬೊಮ್ಮಾಯಿ
ಸುದ್ದಿಗಾರರೊಂದಿಗೆ ಮಾನಾಡಿದ ಅವರು, ರೋಹಿಣಿ ಸಿಂಧೂರಿ ಅವರು ಮೈಸೂರು ಡಿಸಿ ಆಗಿದ್ದಾಗ ಹಲವು ಅಕ್ರಮಗಳನ್ನು ಮಾಡಿದ್ದಾರೆ. ಅಕ್ರಮಗಳನ್ನು ಬಯಲು ಮಾಡಿದ್ದಕ್ಕೆ ನನ್ನ ವಿರುದ್ಧ ಸುಳ್ಳು ಆರೋಪ ಮಾಡಿದ್ದಾರೆ. ನನ್ನ ವಿರುದ್ಧ ಅಕ್ರಮ ಭೂಹಗರಣ ಆರೋಪ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ರೋಹಿಣಿ ಸಿಂಧೂರಿ ವಿರುದ್ಧ ಮೈಸೂರು ಕೋರ್ಟ್ ನಲ್ಲಿ ಮಾನನಷ್ಟ ಕೇಸ್ ದಾಖಲಿಸಿದ್ದೇನೆ ಎಂದು ತಿಳಿಸಿದ್ದಾರೆ.