ಮೈಸೂರು : ಕೆಂಪೇಗೌಡರ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರನ್ನು ಆಹ್ವಾನಿಸದ ಬಿಜೆಪಿ ಸರ್ಕಾರದ ವಿರುದ್ಧ ಜೆಡಿಎಸ್ ಶಾಸಕ ಸಾ.ರಾ.ಮಹೇಶ್ ವಾಗ್ದಾಳಿ ನಡೆಸಿದ್ದಾರೆ.
52 ಮತದಾರರನ್ನು ಹೊಂದಿರುವ ಹಿಮಾಚಲದಲ್ಲಿ ವಿಶ್ವದ ಅತಿ ಎತ್ತರದ ಮತದಾನ ಕೇಂದ್ರ ಸ್ಥಾಪನೆ | WATCH VIDEO
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯ ಕೆಲವು ನಾಯಕರ ಸಂಕುಚಿತತೆಯೇ ಇದಕ್ಕೆ ಕಾರಣ, ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಬಿಜೆಪಿ ಹೃದಯ ವೈಶಾಲ್ಯತೆ ಮೆರೆಯಬೇಕಾಗಿತ್ತು. ಈ ದೇಶ, ರಾಜ್ಯಕ್ಕೆ ದೇವೇಗೌಡರ ಕೊಡುಗೆ ದೊಡ್ಡದಿದೆ. ಕಾರ್ಯಕ್ರಮಕ್ಕೆ ದೇವೇಗೌಡರಿಗೆ ಆಹ್ವಾನ ನೀಡಬೇಕಿತ್ತು ಎಂದರು.
ರಾತ್ರೋರಾತ್ರಿ ಬೇಕಾಬಿಟ್ಟಿ ಕರೆದರೆ ಯಾರು ಹೋಗುತ್ತಾರೆ. ಪ್ರತಿಮೆ ಅನಾವರಣ, ವೇದಿಕೆ ಕಾರ್ಯಕ್ರಮಕ್ಕೆ ಪ್ರತ್ಯೇಕ ಆಹ್ವಾನ ಪತ್ರಿಕೆ ನೀಡಬೇಕಿತ್ತು. ವೇದಿಕೆ ಕಾರ್ಯಕ್ರದ ಆಹ್ವಾನ ಪತ್ರಿಕೆಯಲ್ಲೂ ದೇವೇಗೌಡರ ಹೆಸರು ಇದ್ದಿಲ್ಲ ಎಂದು ಹೇಳಿದ್ದಾರೆ.
ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ ಮಹತ್ವದ ಮಾಹಿತಿ: 30 ದಿನಗಳಲ್ಲಿ ಈ ಕೆಲಸವನ್ನು ಮಾಡುವಂತೆ ಸೂಚನೆ