ಬೆಂಗಳೂರು : ನ್ಯಾಷನಲ್ ಹೆರಾಲ್ಡ್ ಪ್ರಕರಣ ಸಂಬಂಧ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಇಡಿ ವಿಚಾರಣೆ ವಿರುದ್ಧ ಕಾಂಗ್ರೆಸ್ ಇಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದೆ.
ಕಾಂಗ್ರೆಸ್ ಪ್ರತಿಭಟನೆಯಲ್ಲಿ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ, ರಾಹುಲ್ ಗಾಂಧಿಯವರನ್ನು ಇಡಿ ಯವರು ಕರೆದಾಗಲೂ ಇಡಿ ಕಚೇರಿಯವರೆಗೆ ಪ್ರತಿಭಟನೆ ಮಾಡಿದ್ದೇವು. ಮತ್ತೆ ಸೋನಿಯಾ ಗಾಂಧಿವರೆಗೆ ಇಡಿ ವಿಚಾರಣೆಗೆ ಕರೆದಿದ್ದಾರೆ. ಈ ಮೂಲಕ ಬಿಜೆಪಿ ಜನರಿಗೆ ತಪ್ಪು ಮಾಹಿತಿ ಕೊಡೊವ ಕೆಲಸ ಮಾಡುತ್ತಿದೆ. ದೇಶದ ಜನರನ್ನು ತಪ್ಪು ದಾರಿಗೆ ಎಳೆಯುವ ಪ್ರಯತ್ನ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
BIGG NEWS : ಧಾರವಾಡದಲ್ಲಿ ವಾಹನ ತೊಳೆಯಲು ಹೋದಾಗ ಘೋರ ದುರಂತ : ಕರೆಯಲ್ಲಿ ಮುಳುಗಿ ತಂದೆ, ಮಗ ಸಾವು!
ಪ್ರಧಾನಿ ನರೇಂದ್ರ ಮೋದಿ ಅಧಿಕಾರಕ್ಕೆ ಬಂದಾಗಿನಿಂದ ಸಂಘ, ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ಕಾಂಗ್ರೆಸ್ ಪಕ್ಷದ ನಾಯಕರನ್ನು, ಕಾರ್ಯಕರ್ತರನ್ನು ಹೆದರಿಸುವ ಕೆಲಸ ಮಾಡಲಾಗುತ್ತಿದೆ. ಬಿಜೆಪಿಗೆ ಸೋಲಿನ ಭಯ ಶುರುವಾಗಿದೆ. ಹೀಗಾಗಿ ಕಾಂಗ್ರೆಸ್ ಪಕ್ಷವನ್ನು ಮುಗಿಸುವ ಕೆಲಸ ಮಾಡಲಾಗುತ್ತಿದೆ ಎಂದು ಕಿಡಿಕಾರಿದೆ.
ಎಚ್ಚರ..! ʻವಿಶ್ವದಲ್ಲೇ 3 ವೈರಸ್ ʼಗಳು, ಕರೋನಾ ವೈರಸ್ಗಿಂತ ಹೆಚ್ಚು ಅಪಾಯಕಾರಿ: ʼ ಶಾಕಿಂಗ್ ʼನೀಡಿದ ತಜ್ಞರು
ದೇಶದಲ್ಲಿ ಬೆಲೆ ಏರಿಕೆ, ಆಡಳಿತ ವೈಫಲ್ಯ, ಭ್ರಷ್ಟಾಚಾರ, ಅಕ್ರಮಗಳನ್ನು ಮುಚ್ಚಿಹಾಕಲು ಬಿಜೆಪಿಯಿಂದ ನ್ಯಾಷನಲ್ ಹೆರಾಲ್ಡ್ ಪ್ರಕರಣದ ತನಿಖೆ ಮಾಡಲಾಗುತ್ತಿದೆ. ಈ ಮೂಲಕ ದೇಶದ ಜನರ ಗಮನ ಬೇರೆಡೆ ಸೆಳೆಯಲು ಪ್ರಯತ್ನಿಸಲಾಗುತ್ತಿದೆ ಎಂದು ಹೇಳಿದ್ದಾರೆ.