ಬೆಂಗಳೂರು : ಶಾಲಾ ಮಕ್ಕಳಿಗೆ ನೈತಿಕ ಶಿಕ್ಷಣ ಸಂಬಂಧ ಚರ್ಚೆ ನಡೆಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ನೇತೃತ್ವದಲ್ಲಿ ಜನವರಿ 9 ರ ನಾಳೆ ಸಮಾಜದ ಎಲ್ಲ ಧರ್ಮಗಳು, ಮಠಾಧೀಶರು, ಮುಖಂಡರ ಸಭೆ ಕರೆಯಲಾಗಿದೆ.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಬಿ.ಸಿ.ನಾಗೇಶ್ ಅವರ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ಸಭೆಗೆ ಆದಿಚುಂಚನಗಿರಿ ಸ್ವಾಮೀಜಿ, ಸಿದ್ದಗಂಗಾ ಸ್ವಾಮೀಜಿ ಸೇರಿ ಎಲ್ಲ ಧರ್ಮಗಳ ಪ್ರಮುಖ ಧರ್ಮ ಗುರುಗಳು, ಮುಖಂಡರಿಗೆ ಆಹ್ವಾನ ಕಳಿಸಲಾಗಿದೆ.
ಶಾಲಾ ಮಕ್ಕಳಿಗೆ ನೈತಿಕ ಶಿಕ್ಷಣ ಆರಂಭಿಸುವುದಾಗಿ ಶಿಕ್ಷಣ ಇಲಾಖೆ ಕೆಲ ತಿಂಗಳ ಹಿಂದೆಯೇ ಘೋಷಣೆ ಮಾಡಿತ್ತು. ಹೀಗಾಗಿ ಈ ಸಂಬಂಧ ಸಮಾಜದ ಧರ್ಮಗುರುಗಳು, ಮಠಾಧೀಶರೊಂದಿಗೆ ಚರ್ಚೆ ನಡೆಸಿ ಮುಂದಿನ ತೀರ್ಮಾನ ಕೈಗೊಳ್ಳಲು ಸಭೆ ಆಯೋಜಿಸಲಾಗಿದೆ.
Cold Wave: ದೆಹಲಿಯಲ್ಲಿ ದಟ್ಟ ಮಂಜು ಸಹಿತ ಚಳಿಗೆ ಜನತೆ ಗಡಗಡ: 20 ವಿಮಾನ, 42 ರೈಲು ಸಂಚಾರ ವಿಳಂಬ
BIGG NEWS : ಮುಖ್ಯಮಂತ್ರಿಗಳ ಅಮೃತ ಜೀವನ ಯೋಜನೆ : ಹಸು/ಎಮ್ಮೆ ಘಟಕ ಸ್ಥಾಪನೆಗೆ ಅರ್ಜಿ ಆಹ್ವಾನ