ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ಪದವಿ ಪೂರ್ವ ಶಿಕ್ಷಣ ಇಲಾಖೆ ಸಿಹಿಸುದ್ದಿ ನೀಡಿದ್ದು, ಪ್ರಸಕ್ತ ಸಾಲಿನಲ್ಲಿ 3,500 ಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರ ನೇಮಕ ಮಾಡಿಕೊಳ್ಳಲು ಹಾಗೂ ಸಂಭಾವನೆಯನ್ನು 9 ಸಾವಿರ ರೂ.ನಿಂದ 15 ಸಾವಿರ ರೂ.ಗೆ ಹೆಚ್ಚಿಸುವಂತೆ ಕೋರಿ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.
BIGG NEWS : ಉಡುಪಿಯಲ್ಲಿ ಮಳೆ ಅಬ್ಬರಕ್ಕೆ ಭಾರೀ ಅನಾಹುತ : ರಸ್ತೆಯಿಂದ ಸಮುದ್ರಕ್ಕೆ ಕಾರು ಉರುಳಿ ಬಿದ್ದು ಓರ್ವ ಸಾವು
ರಾಜ್ಯ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಖಾಲಿ ಇರುವ 3,500 ಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರ ನೇಮಕ ಮಾಡಿಕೊಳ್ಳಲು ಹಾಗೂ ಅತಿಥಿ ಉಪನ್ಯಾಸಕರ ಗೌರವಧನವನ್ನು 15 ಸಾವಿರ ರೂ.ಗಳಿಗೆ ಏರಿಕೆ ಮಾಡುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್ ಅವರಿಗೆ ಪ್ರಸ್ತಾವನೆ ಸಲ್ಲಿಸಿದ್ದಾರೆ.
BIGG NEWS : ಆಗಸ್ಟ್ 3 ರಂದು ದಾವಣಗೆರೆಯಲ್ಲಿ `ಸಿದ್ದರಾಮೋತ್ಸವ’ ಕಾರ್ಯಕ್ರಮ : ಮಾಜಿ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ
ಇನ್ನು ಕಳೆದ ವರ್ಷ 3552 ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಲಾಗಿತ್ತು. ಈ ಉಪನ್ಯಾಸಕರ ಗೌರವಧನವನ್ನು ಕನಿಷ್ಟ 12 ಸಾವಿರ ರೂ.ಗಳಿಗೆ ಹೆಚ್ಚಿಸುವಂತೆ ಹಿಂದೆಯೂ ಪಿಯು ಇಲಾಖೆ ಪ್ರಸ್ತಾವನೆ ಸಲ್ಲಿಸಿತ್ತು. ಆದರೆ ಕೋವಿಡ್ ಕಾರಣ ಗೌರವಧನ ಹೆಚ್ಚಿಸಿರಲಿಲ್ಲ. ಈ ಬಾರಿ ಗೌರವಧನ ಹೆಚ್ಚಳ ಮಾಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.