ಬಳ್ಳಾರಿ : ಕಲುಷಿತ ನೀರು ಸೇವನೆಯಿಂದ 80 ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿರುವ ಘಟನೆ ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಅಂಕಮನಾಳ ಗ್ರಾಮದಲ್ಲಿ ನಡೆದಿದೆ.
BIGG NEWS : ವಿಜಯಪುರದಲ್ಲಿ ಮುಂದುವರೆದ ಮಳೆಯ ಆರ್ಭಟ : ಡೋಣಿ ನದಿ ಪ್ರವಾಹ, ಸಂಚಾರ ಬಂದ್!
ಅಂಕಮನಾಳ ಗ್ರಾಮದಲ್ಲಿ ಕಲುಷಿತ ನೀರು ಸೇವನೆಯಿಂದ ನಿನ್ನೆ ಸಂಜೆ 50 ಜನರು ಅಸ್ವಸ್ಥರಾಗಿದ್ದರು. ಇದೀಗ ಮತ್ತೆ 34 ಮಂದಿಗೆ ವಾಂತಿಭೇದಿ ಕಾಣಿಸಿಕೊಂಡಿದ್ದು, ಸದ್ಯ ಅವರನ್ನು ಅಂಕಮನಾಳ ಗ್ರಾಮದ ತಾತ್ಕಾಲಿಕ ಆಸ್ಪತ್ರೆ, ಸಂಡೂರು ತಾಲೂಕಾಸ್ಪತ್ರೆ, ಬಳ್ಳಾರಿ ವಿಮ್ಸ್ ಸೇರಿದಂತೆ ವಿವಿಧ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ವಾಂತಿ ಭೇದಿ ಪ್ರಕರಣ ಹೆಚ್ಚಳ ಹಿನ್ನೆಯಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು ತಪಾಸಣೆ ಕಾರ್ಯ ಕೈಗೊಂಡಿದ್ದಾರೆ. ವಾಂತಿ ಭೇದಿ ಪ್ರಕರಣ ಹೆಚ್ಚಳ ಹಿನ್ನೆಯಲ್ಲಿ ಜನರು ಆತಂಕದಲ್ಲಿದ್ದಾರೆ.
Scholarship : ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳೇ ಗಮನಿಸಿ : ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನ