ತುಮಕೂರು: ತುಮಕೂರಿನಲ್ಲಿ ತಾಯಿ ಹಾಗೂ ಅವಳಿ ಶಿಶುಗಳ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ಲಕ್ಷ್ಯ ತೊರಿದ್ದ ಜಿಲ್ಲಾಸ್ಪತ್ರೆಯ ವೈದ್ಯೆ ಹಾಗೂ ಮೂವರು ನರ್ಸ್ ಗಳನ್ನು ಆರೋಗ್ಯ ಸಚಿವ ಸುಧಾಕರ್ ಸಸ್ಪೆಂಡ್ ಮಾಡಿ ಆದೇಶ ಹೊರಡಿಸಿದ್ದಾರೆ.
BIGG NEWS : `ಯಶಸ್ವಿನಿ ಯೋಜನೆ’ : ರೈತ ಸಮುದಾಯಕ್ಕೆ ಇಲ್ಲಿದೆ ಮಹತ್ವದ ಮಾಹಿತಿ
ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ತಾಯಿ ಕಾರ್ಡ್ ಇಲ್ಲ ಎಂಬ ಕಾರಣ ನೀಡಿ, ಆಸ್ಪತ್ರೆಯಿಂದ ವಾಪಸ್ ಕಳುಹಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ವೈದ್ಯೆಯ ಬಳಿ ಅಂಗಲಾಚಿ ಕೇಳಿದ್ರೂ ಚಿಕಿತ್ಸೆ ಕೊಡದೆ ವೈದ್ಯೆ ನಿರ್ಲಕ್ಷ್ಯ ಮಾಡಿದ್ದರಿಂದ ಮಕ್ಕಳು ಹಾಗೂ ತಾಯಿ ಮೂವರೂ ಮೃತಪಟ್ಟಿದ್ದರು.
ಬಾಣಂತಿ ಮತ್ತು ನವಜಾತ ಶಿಶುಗಳ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ವೈದ್ಯರು ಮತ್ತು ಶುಶ್ರೂಷಕರ ಕರ್ತವ್ಯ ಲೋಪ, ನಿರ್ಲಕ್ಷ್ಯತೆಯು ಗಂಭೀರ ಸ್ವರೂಪದ್ದಾಗಿರುವುದರಿಂದ ಆಯುಕ್ತರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳು ಸಂಬಂಧಪಟ್ಟ ಸ್ತ್ರೀ ರೋಗ ಮತ್ತು ಪ್ರಸೂತಿ ತಜ್ಞರು ಹಾಗೂ ಕರ್ತವ್ಯ ನಿರತ 3 ಶುಶ್ರೂಷಾಧಿಕಾರಿಗಳನ್ನು ತನಿಖೆ ಮತ್ತು ಶಿಸ್ತುಕ್ರಮ ಬಾಕಿ ಇರಿಸಿ ತಕ್ಷಣದಿಂದಲೇ ಜಾರಿಗೆ ಬರುವಂತೆ ಸರ್ಕಾರಿ ಸೇವೆಯಿಂದ ಅಮಾನತ್ತುಗೊಳಿಸಿದ್ದಾರೆ. ಜೊತೆಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರಿಸುವಂತೆ ಕಾರಣ ಕೇಳಿ ನೋಟಿಸನ್ನು ಜಾರಿಗೊಳಿಸಲಾಗಿದೆ.
BIGG NEWS : ಗುಜರಾತ್ ಮಾದರಿಯಲ್ಲಿ `ಕರ್ನಾಟಕದಲ್ಲೂ ಹೂಡಿಕೆ ಪ್ರಾಧಿಕಾರ’ ರಚನೆ : ಸಚಿವ ಸಂಪುಟ ನಿರ್ಧಾರ