ಬೆಂಗಳೂರು : ಪಾದಚಾರಿ ಮಾರ್ಗದಲ್ಲಿ ತಮ್ಮ ವಾಹನಗಳನ್ನು ನಿಲ್ಲಿಸುವವರ ಮೇಲೆ ಬೆಂಗಳೂರು ನಗರ ಸಂಚಾರ ಪೊಲೀಸರು ಕಾನೂನು ಕ್ರಮಕ್ಕೆ ಮುಂದಾಗಿದ್ದಾರೆ.
ನೆಚ್ಚಿನ ವ್ಯಕ್ತಿಯ ಫೋಟೋ ಇರುವ ‘ಟಿ-ಶರ್ಟ್’ ಧರಿಸೋದ್ರಿಂದ ‘ಧಾರ್ಮಿಕ ಅಶಾಂತಿ’ ಉಂಟಾಗೋದಿಲ್ಲ: ಪಂಜಾಬ್ ಹೈಕೋರ್ಟ್
ಹೌದು, ವಾಹನ ಸವಾರರು, ವಿಶೇಷವಾಗಿ ದ್ವಿಚಕ್ರ ವಾಹನ ಸವಾರರು, ಫುಟ್ ಪಾತ್ ಗಳನ್ನು ಅತಿಕ್ರಮಿಸುವುದು ನಗರದಲ್ಲಿ ಸಾಮಾನ್ಯ ದೃಶ್ಯವಾಗಿದೆ. ಅಪಾಯವನ್ನುಂಟುಮಾಡುತ್ತಿದೆ. ಹೀಗಾಗಿ ಫುಟ್ ಪಾತ್ ಗಳಲ್ಲಿ ವಾಹನಗಳನ್ನು ನಿಲ್ಲಿಸುವವರ ವಿರುದ್ಧ ಕಾನೂನು ಕ್ರಮಕ್ಕೆ ಬೆಂಗಳೂರು ನಗರ ಸಂಚಾರ ಪೊಲೀಸರು ಮುಂದಾಗಿದ್ದಾರೆ.
ಪಾದಚಾರಿ ಮಾರ್ಗದಲ್ಲಿ ವಾಹನಗಳನ್ನು ನಿಲ್ಲಿಸುವುದರಿಂದ ಬಹುಮುಖ್ಯವಾಗಿ ಮಕ್ಕಳು ಮತ್ತು ಹಿರಿಯ ನಾಗರಿಕರು ಓಡಾಡಲು ತೊಂದರೆ ಅನುಭವಿಸಬೇಕಾಗುತ್ತದೆ. ಈ ಹಿನ್ನೆಲೆಯಲ್ಲಿ ಪಾದಚಾರಿ ಮಾರ್ಗದಲ್ಲಿ ವಾಹನ ಚಲಾಯಿಸುತ್ತಿದ್ದರೆ, ಪಾದಚಾರಿ ಮಾರ್ಗದಲ್ಲಿ ವಾಹನ ನಿಲುಗಡೆ ಮಾಡಿದ್ದರೆ ಅದನ್ನು ತೆರವುಗೊಳಿಸಲು ಕಾನೂನಿನಲ್ಲಿ ಅವಕಾಶವಿದ್ದು, ಎಲ್ಲ ಪೊಲೀಸ್ ಇನ್ಸ್ಪೆಕ್ಟರ್ಗಳು ಈ ಬಗ್ಗೆ ಕ್ರಮಜರುಗಿಸಬೇಕು ಎಂದು ಸಂಚಾರ ವಿಭಾಗದ ವಿಶೇಷ ಪೊಲೀಸ್ ಆಯುಕ್ತ ಡಾ.ಎಂ.ಎ.ಸಲೀಂ ಸೂಚಿಸಿದ್ದಾರೆ.