ಹೊಸಪೇಟೆ : ಮೊಹರಂ ಹಬ್ಬ ಆಚರಣೆ ನಿಮಿತ್ತ ಜಿಲ್ಲೆಯಾದ್ಯಂತ ಮದ್ಯಪಾನ ಮಾರಾಟ ಮತ್ತು ಸಾಗಾಣಿಕೆ ಮಾಡದಂತೆ ಹಾಗೂ ಬಾರ್&ರೆಸ್ಟೋರೆಂಟ್ಗಳನ್ನು ಮುಚ್ಚುವಂತೆ ವಿಜಯನಗರ ಜಿಲ್ಲಾ ದಂಡಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿಗಳಾದ ಅನಿರುದ್ಧ ಶ್ರವಣ್ ಅವರು ನಿಷೇಧಾಜ್ಞೆ ಆದೇಶ ಹೊರಡಿಸಿದ್ದಾರೆ.
BIGG NEWS: ನಾಳೆ ವರಮಹಾಲಕ್ಷ್ಮೀ ಹಬ್ಬ ಹಿನ್ನೆಲೆ; ಕೆ.ಆರ್ ಮಾರ್ಕೆಟ್ನಲ್ಲಿ ಹೂವು, ಹಣ್ಣು ಖರೀದಿಗೆ ಮುಗಿಬಿದ್ದ ಜನ…!
ಯಾವುದೇ ಅಹಿತಕರ ಘಟನೆಗಳು ಜರುಗದಂತೆ ಕಾನೂನು ಸುವ್ಯವಸ್ಥೆ ಹಾಗೂ ಶಾಂತಿ ಪಾಲನೆಗಾಗಿ ಮತ್ತು ಸಾರ್ವಜನಿಕರ ಹಿತಾಸಕ್ತಿ ಕಾಪಾಡುವ ಹಿತದೃಷ್ಟಿಯಿಂದ ವಿಜಯನಗರ ಜಿಲ್ಲೆಯಾದ್ಯಂತ ಆ.07ರಂದು ಬೆಳಗ್ಗೆ 6ರಿಂದ ಆ.10ರ ರಾತ್ರಿ 10ಗಂಟೆಯವರೆಗೆ ಮದ್ಯ ಮಾರಾಟ ಮತ್ತು ಸಾಗಾಣಿಕೆ ಮಾಡದಂತೆ ಮದ್ಯದ ಅಂಗಡಿ, ಬಾರ್ ಮತ್ತು ರೆಸ್ಟೋರೆಂಟ್ಗಳನ್ನು ಮುಚ್ಚುವಂತೆ ನಿಷೇದಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಅನಿರುದ್ದ್ ಶ್ರವಣ್.ಪಿ ಅವರು ಆದೇಶಿಸಿದ್ದಾರೆ.
ಈ ಆದೇಶವನ್ನು ಅನುಷ್ಠಾನಕ್ಕೆ ತರಲು ಅಗತ್ಯ ಕಟ್ಟುನಿಟ್ಟಿನ ಕ್ರಮಗಳನ್ನು ವಿಜಯನಗರ ಜಿಲ್ಲೆಯ ಜಿಲ್ಲಾ ಪೆÇಲೀಸ್ ಅಧೀಕ್ಷಕರು ಹಾಗೂ ಅಬಕಾರಿ ಇಲಾಖೆಯ ಅಬಕಾರಿ ಉಪ ಆಯುಕ್ತರು ಜರುಗಿಸಬೇಕು ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.
BIGG NEWS: ನಾಳೆ ವರಮಹಾಲಕ್ಷ್ಮೀ ಹಬ್ಬ ಹಿನ್ನೆಲೆ; ಕೆ.ಆರ್ ಮಾರ್ಕೆಟ್ನಲ್ಲಿ ಹೂವು, ಹಣ್ಣು ಖರೀದಿಗೆ ಮುಗಿಬಿದ್ದ ಜನ…!