ಶಿವಮೊಗ್ಗ : ಶಿವಮೊಗ್ಗ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯು 2022-23ನೇ ಸಾಲಿನಲ್ಲಿ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಮುಖ್ಯಮಂತ್ರಿಗಳ ಅಮೃತ ಜೀವನ ಯೋಜನೆಯಡಿ ಹಸು/ಎಮ್ಮೆ ಘಟಕಗಳನ್ನು ಅನುಷ್ಠಾನಗೊಳಿಸುತ್ತಿದ್ದು, ಅರ್ಹ ಪರಿಶಿಷ್ಟ ಜಾತಿ/ಪಂಗಡ ಹಾಗೂ ಇತರೆ ವರ್ಗದ ಕೂಲಿ ಕಾರ್ಮಿಕರು, ಕೃಷಿ ಕಾರ್ಮಿಕರು ಮತ್ತು ಪಶು ಸಂಗೋಪನೆಯಲ್ಲಿ ತೊಡಗಿಕೊಂಡ ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ.
ಆಸಕ್ತರು ನಿಗಧಿತ ನಮೂನೆ ಅರ್ಜಿಯನ್ನು ಆಯಾ ತಾಲೂಕಿನ ಮುಖ್ಯ ಪಶುವೈದ್ಯಾಧಿಕಾರಿಗಳ ಕಚೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಸೂಕ್ತ ದಾಖಲೆಗಳನ್ನು ಲಗತ್ತಿಸಿ ಡಿ.30 ರೊಳಗಾಗಿ ಸಲ್ಲಿಸುವಂತೆ ಇಲಾಖೆಯ ಉಪನಿರ್ದೇಶಕ ಡಾ|| ಶಿವಯೋಗಿ ಬಿ.ಯಲಿ ರವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಆಯಾ ತಾಲೂಕು ಮುಖ್ಯ ಪಶುವೈದ್ಯಾಧಿಕಾರಿಗಳ ಕಚೇರಿಯನ್ನು ಶಿವಮೊಗ್ಗ-9482635093, ಭದ್ರಾವತಿ-9986624123, ತೀರ್ಥಹಳ್ಳಿ-9448792886, ಹೊಸನಗರ-9448165747, ಸಾಗರ-9448007542, ಸೊರಬ-9481255897 ಮತ್ತು ಶಿಕಾರಿಪುರ-9482635093 ಗಳನ್ನು ಸಂಪರ್ಕಿಸುವಂತೆ ಕೋರಲಾಗಿದೆ.