ಬೆಂಗಳೂರು: ಚಿತ್ರದುರ್ಗದ ಮುರುಘಾ ಮಠದ ( Murugha Matt ) ಡಾ.ಶಿವಮೂರ್ತಿ ಮುರುಘಾ ಶರಣರನ್ನು ಬಾಲಕಿಯರ ಮೇಲಿನ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ದಾಖಲಾದ ಪೋಕ್ಸೋ ಕೇಸ್ ನಲ್ಲಿ ಬಂಧಿಸಲಾಗಿದೆ. ಈ ಕಾರಣದಿಂದಾಗಿ ಅವರನ್ನು ಅನಾಥಸೇವಾಶ್ರಮದ ವಿಶ್ವಸ್ಥ ಸಮಿತಿಯ ಸದಸ್ಯತ್ವದಿಂದ ವಜಾಗೊಳಿಸಲಾಗಿದೆ.
BREAKING NEWS : ಮುರುಘಾ ಶ್ರೀಗಳ ಬೆಳ್ಳಂಬೆಳಗ್ಗೆ ಆರೋಗ್ಯ ತಪಾಸಣೆ : ಇಂದೂ ಮುಂದುವರೆಯಲಿದೆ ಶ್ರೀಗಳ ವಿಚಾರಣೆ
ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಮಲ್ಲಾಡಿಹಳ್ಳಿಯ ಅನಾಥಸೇವಾಶ್ರಮ ವಿಶ್ವಸ್ತ ಸಮಿತಿಯ ಗೌರವ ಕಾರ್ಯದರ್ಶಿ ಪ್ರೊ.ಕೆ.ಇ ರಾಧಾಕೃಷ್ಣ ( Prof K E Radhakrishna ) ಅವರು, ದಿನಾಂಕ 03-09-2022ರಂದು ಮೈಸೂರಿನ ಮಲ್ಲಾಡಿಹಳ್ಳಿಯ ಆಶ್ರಮದ ಅಧೀನದಲ್ಲಿರುವ ಎಂ ಎ ಎಸ್ ವಿ ಎಸ್ ಗುರುಕುಲ ಪಿಯು ಕಾಲೇಜಿನಲ್ಲಿ ತುರ್ತು ಸಭೆ ನಡೆಸಲಾಯಿತು. ಈ ಸಭೆಯಲ್ಲಿ ಪೋಕ್ಸೋ ಕಾಯ್ದೆಯಡಿಯಲ್ಲಿ ಬಂಧನಕ್ಕೆ ಒಳಗಾಗಿ ಕ್ರಿಮಿನಲ್ ಆಪಾದನೆಯನ್ನು ಎದುರಿಸುತ್ತಿರುವ ಶ್ರೀ ಶಿವಮೂರ್ತಿ ಮುರುಘಾಶರಣರನ್ನು ( Murugha Shivasharanru ) ತಕ್ಷಣದಿಂದ ಜಾರಿಗೆ ಬರುವಂತೆ ಅನಾಥಸೇವಾಶ್ರಮದ ಅಧ್ಯಕ್ಷಸ್ಥಾನದಿಂದ ವಿಮುಕ್ತಿಗೊಳಿಸಲಾಗಿದೆ ಎಂದಿದ್ದಾರೆ.
ಇನ್ನೂ ಇದಷ್ಟೇ ಅಲ್ಲದೇ ಅನಾಥಸೇವಾಶ್ರಮ ವಿಶ್ವಸ್ತ ಸಮಿತಿಯ ಸದಸ್ಯತ್ವದಿಂದಲೂ ಅಮಾನತುಗೊಳಿಸಲಾಗಿದೆ ಎಂಬುದಾಗಿ ತಿಳಿಸಿದ್ದಾರೆ.
ಅಂದಹಾಗೇ ಮುರುಘಾ ಶ್ರೀಗಳ ವಿರುದ್ಧ ಮೈಸೂರಿನ ಒಡನಾಡಿ ಸಂಸ್ಥೆಯ ಮೂಲಕ ಬಾಲಕಿಯರಿಗೆ ಲೈಂಕಿಗ ಕಿರುಕುಳ ಆರೋಪದಲ್ಲಿ ದಿನಾಂಕ 26-08-2022ರಂದು ನಜರಾಬಾದ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ದೂರಿನ ಆಧಾರದಲ್ಲಿ ಮುರುಘಾ ಶರಣರ ವಿರುದ್ಧ ಪೋಕ್ಸೋ ಕೇಸ್ ದಾಖಲಾಗಿತ್ತು. ಈ ಬಳಿಕ ಅವರನ್ನು ದಿನಾಂಕ 02-09-2022ರಂದು ಚಿತ್ರದುರ್ಗ ಗ್ರಾಮಾಂತರ ಠಾಣೆಯ ಪೊಲೀಸರು ( Chitradurga Rural Police Station ) ಬಂಧಿಸಿದ್ದರು. ಈಗ ಅವರು ಸೆಪ್ಟೆಂಬರ್ 5ರವರೆಗೆ ನ್ಯಾಯಾಂಗ ಬಂಧನದಲ್ಲಿ ಇದ್ದಾರೆ.
ವರದಿ : ವಸಂತ ಬಿ ಈಶ್ವರಗೆರೆ