ಚಿತ್ರದುರ್ಗ : ಪೋಕ್ಸೋ ಪ್ರಕರಣದಲ್ಲಿ ಜೈಲುಪಾಲಾಗಿರುವ ಮುರುಘಾಶ್ರೀಗಳಿಗೆ ಹೃದಯ ಸಮಸ್ಯೆ ಹಿನ್ನೆಲೆಯಲ್ಲಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ಯಲು ಸೂಚನೆ ಚಿತ್ರದುರ್ಗದ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಸೂಚನೆ ನೀಡಿದೆ.
ಅಪ್ರಾಪ್ತ ವಯಸ್ಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ಅವರನ್ನು ಶಿವಮೊಗ್ಗದ ಮೆಗ್ಗಾನ್ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲು 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜಿಲ್ಲಾ ಕಾರಾಗೃಹದ ಅಧಿಕಾರಿಗಳಿಗೆ ಅನುಮತಿ ನೀಡಿದೆ.
ಚಿತ್ರದುರ್ಗದ 2 ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶ ಬಿ.ಕೆ.ಕೋಮಲಾ ಅವರುಈ ಆದೇಶವನ್ನು ಪ್ರಕಟಿಸಿದರು.ಮುರುಘಾಶ್ರೀಗಳಿಗೆ ಅಗತ್ಯವಿರುವ ಎಲ್ಲಾ ಪರೀಕ್ಷೆಗಳಿಗೆ ಒಳಪಡಿಸುವಂತೆ ನ್ಯಾಯಾಲಯವು ಅಧಿಕಾರಿಗಳಿಗೆ ನಿರ್ದೇಶಿಸಿದೆ. ಪರೀಕ್ಷೆಗಳು ಪೂರ್ಣಗೊಳ್ಳುವವರೆಗೆ ಮಠಾಧೀಶರನ್ನು ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿ ಇರಿಸಲು ನ್ಯಾಯಾಧೀಶರು ಅಧಿಕಾರಿಗಳಿಗೆ ಅನುಮತಿ ನೀಡಿದ್ದಾರೆ. ಎಲ್ಲಾ ಸಂಬಂಧಿತ ದಾಖಲೆಗಳನ್ನು ನ್ಯಾಯಾಲಯಕ್ಕೆ ಸಲ್ಲಿಸುವಂತೆ ಜೈಲು ಅಧಿಕಾರಿಗಳಿಗೆ ನಿರ್ದೇಶಿಸಲಾಗಿದೆ.